ನವದೆಹಲಿ: ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿರ್ಧರಿಸಿದೆ.
ಸಂಪೂರ್ಣ ಡಿಜಿಟಲ್ ಟೋಲಿಂಗ್ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.ಹೊಸ ನಿಯಮದ ಪ್ರಕಾರ ವಾಹನ ಸವಾರರು ಫಾಸ್ಟ್ ಟ್ಯಾಗ್ ಅಥವಾ ಯುಪಿಐ ಮೂಲಕ ಮಾತ್ರ ಟೋಲ್ ಶುಲ್ಕ ಪಾವತಿಸಬೇಕಿದೆ.
ಪ್ರಸ್ತುತ ದೇಶಾದ್ಯಂತ ಶೇಕಡ 98 ರಷ್ಟು ವಾಹನಗಳು ಫಾಸ್ಟ್ ಟ್ಯಾಗ್ ಬಳಕೆ ಮಾಡುತ್ತಿವೆ. ನಗದು ಪಾವತಿಯಿಂದ ಉಂಟಾಗುವ ಟ್ರಾಫಿಕ್ ದಟ್ಟಣೆ ತಪ್ಪಿಸುವುದು ಯೋಜನೆಯ ಉದ್ದೇಶವಾಗಿದೆ,
ಪ್ರಸ್ತುತ ನಿಯಮದಂತೆ ಫಾಸ್ಟ್ ಟ್ಯಾಗ್ ಇಲ್ಲದೆ ನಗದು ಪಾವತಿಸುವವರಿಗೆ ಎರಡು ಪಟ್ಟು ಶುಲ್ಕ ವಿಧಿಸಲಾಗುತ್ತಿದೆ. ಆದರೆ ಯುಪಿಐ ಮೂಲಕ ಟೋಲ್ ಪಾವತಿಸುವವರೆಗೆ ಕೇವಲ ಶೇಕಡ 1.25 ರಷ್ಟು ಶುಲ್ಕ ವಿಧಿಸಲಾಗುವುದು. ನಗದು ವ್ಯವಹಾರ ನಿಲ್ಲುವುದರಿಂದ 1150ಕ್ಕೂ ಹೆಚ್ಚು ಟೋಲ್ ಪ್ಲಾಜಾಗಳಲ್ಲಿ ಪಾರದರ್ಶಕತೆ ಹೆಚ್ಚಾಗಲಿದೆ ಮತ್ತು ಪ್ರಯಾಣಿಕರ ಸಮಯ ಕೂಡ ಉಳಿತಾಯವಾಗುತ್ತದೆ ಎಂದು ಹೇಳಲಾಗಿದೆ.




