Ad imageAd image

ಬಾಗಲಕೋಟೆಯಲ್ಲಿ ಕಲ್ಲು ತೂರಾಟ ಕೇಸ್ : ಪ್ರಮೋದ್ ಮುತಾಲಿಕ್‌ಗೆ ಜಿಲ್ಲಾ ಪ್ರವೇಶ ನಿರ್ಬಂಧ

Bharath Vaibhav
ಬಾಗಲಕೋಟೆಯಲ್ಲಿ ಕಲ್ಲು ತೂರಾಟ ಕೇಸ್ : ಪ್ರಮೋದ್ ಮುತಾಲಿಕ್‌ಗೆ ಜಿಲ್ಲಾ ಪ್ರವೇಶ ನಿರ್ಬಂಧ
WhatsApp Group Join Now
Telegram Group Join Now

ಬಾಗಲಕೋಟೆ : ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ, ಜಿಲ್ಲಾಡಳಿತವು ಶ್ರೀರಾಮ ಸೇನೆ ಪ್ರಮೋದ್ ಮುತಾಲಿಕ್‌ಗೆ ಒಂದು ತಿಂಗಳ ಕಾಲ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಕಳೆದ 2 ದಿನಗಳ ಹಿಂದೆ ನಗರದಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ಸಂಭವಿಸಿದ ಕಲ್ಲು ತೂರಾಟ ಮತ್ತು ಸಂಘರ್ಷದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್ ಅವರಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿದೆ.

ಬಾಗಲಕೋಟೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸಂಗಪ್ಪ (ಬಾ.ಆ.ಸೇ) ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. “ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 (BNSS) ಸೆಕ್ಷನ್ 163” ರ ಅಡಿಯಲ್ಲಿ ತಮಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿರುವ ಜಿಲ್ಲಾಧಿಕಾರಿಗಳು, ಫೆಬ್ರವರಿ 21, 2026 ರಿಂದ ಮಾರ್ಚ್ 21, 2026 ರವರೆಗೆ ಅನ್ವಯವಾಗುವಂತೆ ಒಂದು ತಿಂಗಳ ಕಾಲ ಪ್ರಮೋದ ಮುತಾಲಿಕ್ ಅವರು ಜಿಲ್ಲೆಯ ಗಡಿ ಪ್ರವೇಶಿಸದಂತೆ ಪ್ರತಿಬಂಧಕಾಜ್ಞೆ ವಿಧಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!