ಧಾರವಾಡ ಜಿಲ್ಲೆಯಲ್ಲಿ ಮೊಬೈಲ್ ಕ್ಯಾಂಟೀನ್ ತೆರೆಯಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ದಾಖಲೆಗಳೊಂದಿಗೆ ಮಾರ್ಚ್ 13, 2026 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು.
ಪ್ರವಾಸೋದ್ಯಮ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಉದ್ಯಮಶೀಲತೆ ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ತರಬೇತಿ ನೀಡಲಾಗುತ್ತದೆ.
ತರಬೇತಿ ಪೂರ್ಣಗೊಳಿಸಿ ಪ್ರಮಾಣ ಪತ್ರ ಪಡೆಯುವ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಘಟಕ ವೆಚ್ಚದ ಶೇ.70 ರಷ್ಟು ಗರಿಷ್ಟ ರೂ.5 ಲಕ್ಷಗಳ ಸಹಾಯಧನ ಒದಗಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ.
10ನೇ ತರಗತಿ ಉತ್ತೀರ್ಣರಾದ 20 ರಿಂದ 55 ವರ್ಷದೊಳಗಿನ ಧಾರವಾಡ ಜಿಲ್ಲೆಯ ಅರ್ಹ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿ ಪಡೆದು, ದಾಖಲೆಗಳೊಂದಿಗೆ ಮಾರ್ಚ್ 13ರೊಳಗಾಗಿ ಸಲ್ಲಿಸಬೇಕು.
ಅರ್ಜಿಗಳನ್ನು ಪ್ರವಾಸೋದ್ಯಮ ಇಲಾಖೆಯ ಕಛೇರಿಗೆ ದ್ವಿಪ್ರತಿಯಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0836-2744522, 2955522 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.




