Ad imageAd image

ರಾಜ್ಯ ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದೆ : ಆರ್ ಅಶೋಕ್ 

Bharath Vaibhav
ರಾಜ್ಯ ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದೆ : ಆರ್ ಅಶೋಕ್ 
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಭುಗಿಲೆದ್ದಿದ್ದು, ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಉದ್ಯೋಗ ನೀಡುವಂತೆ ಆಗ್ರಹಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಈ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಟು ಶಬ್ದಗಳಿಂದ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾತನಾಡಿದ ಆರ್. ಅಶೋಕ್, ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರ ಒಬ್ಬನೇ ಒಬ್ಬ ನಿರುದ್ಯೋಗಿಗೂ ಕೆಲಸ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಅಧಿಕಾರದ ಕುರ್ಚಿಗಾಗಿ ಕಚ್ಚಾಟ ನಡೆಸುತ್ತಿದ್ದಾರೆ. ಇವರ ರಾಜಕೀಯ ಜಿದ್ದಾಜಿದ್ದಿಯಲ್ಲಿ ರಾಜ್ಯದ ಯುವಕರ ಭವಿಷ್ಯ ಬಲಿಯಾಗುತ್ತಿದೆ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರ ದಿವಾಳಿಯಾಗಿದೆ:

ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, “ರಾಜ್ಯ ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದೆ.

ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಹ ಖಜಾನೆಯಲ್ಲಿ ಹಣವಿಲ್ಲದಂತಾಗಿದೆ. ಇನ್ನು ಹೊಸ ನೇಮಕಾತಿ ಹೇಗೆ ಮಾಡುತ್ತಾರೆ?” ಎಂದು ಪ್ರಶ್ನಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!