Ad imageAd image

ಪೋಕ್ಸೋ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಲ್ಲಿಕಾರ್ಜುನ ಮುತ್ಯಾ

Bharath Vaibhav
ಪೋಕ್ಸೋ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಲ್ಲಿಕಾರ್ಜುನ ಮುತ್ಯಾ
WhatsApp Group Join Now
Telegram Group Join Now

ಕಲಬುರ್ಗಿ: ಬಾಲಕಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದ ಕಾರಣ ಪೋಕ್ಸೋ ಕೇಸ್ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿತ್ತು.

ಈ ಪ್ರಕರಣ ರದ್ದುಗೊಳಿಸುವಂತೆ ಕಲಬುರ್ಗಿಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮಲ್ಲಿಕಾರ್ಜುನ ಮುತ್ಯಾ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಸೋಷಿಯಲ್ ಮೀಡಿಯಾದಲ್ಲಿ ಬಾಲಕಿಯೊಂದಿಗೆ ಮಲ್ಲಿಕಾರ್ಜುನ ಮುತ್ಯಾ ಅವರು ಅನುಚಿತವಾಗಿ ವರ್ತಿಸಿದ್ದ ವೀಡಿಯೋ ವೈರಲ್ ಬಗ್ಗೆ ದೂರು ದಾಖಲಿಸಿತ್ತು.

ಈ ಸಂಬಂಧ ಯಾದಗಿರಿ ಎಸ್ಪಿ ಅವರಿಗೆ ಬರೆಯಲಾಗಿದ್ದಂತ ಪತ್ರದಡಿ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಯಾದಗಿರಿಯ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು.

ಇದೀಗ ಮಲ್ಲಿಕಾರ್ಜುನ ಮುತ್ಯಾ ಅವರು ಈ ಪ್ರಕರಣ ರದ್ದುಗೊಳಿಸುವಂತೆ ಕಲಬುರ್ಗಿಯ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅವರು ಸಲ್ಲಿಸಿರುವಂತ ಅರ್ಜಿಯಲ್ಲಿ ಪೋಷಕರೇ ದೂರು ನೀಡಿಲ್ಲ. ಹೀಗಿದ್ದರೂ ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಈ ಹಿನ್ನಲೆಯಲ್ಲಿ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್.2ಕ್ಕೆ ನಿಗದಿ ಪಡಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!