ಚೆನ್ನೈ: ತಮಿಳು ಸೂಪರ್ ಸ್ಟಾರ್, ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. ವಿಚ್ಛೇದನ ಕೋರಿ ನಟ ವಿಅಯ್ ಪತ್ನಿ ಸಂಗೀತಾ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಜಯ್ ಪತ್ನಿ ಸಂಗೀತಾ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ತಮಿಳಿಗ ವೆಟ್ರಿ ಕಳಗಂ ಪಕ್ಷದ ಮೂಲಕ ರಾಜಕೀಯಕ್ಕೆ ಧುಮುಕಿರುವ ದಳಪತಿ ವಿಜಯ್, ಮುಂಬರುವ ತಮಿಳುನಾಡು ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಈಗಾಗಲೇ ಘೋಷಿಸಿದ್ದಾರೆ.
ಆದರೆ ಅವರ ವೈಯಕ್ತಿಕ ಬದುಕಲ್ಲಿ ಬಿರುಗಾಳಿ ಎದ್ದಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ತಿಳಿದುಬಂದಿದೆ.
ನಟ ವಿಜಯ್ ಹಾಗೂ ಪತ್ನಿ ಸಂಗೀತಾ ನಡುವೆ ಕೆಲ ವರ್ಷಗಳಿಂದ ಬಿರುಕು ಮೂಡಿದೆ. ತಮಿಳುನ ಮತ್ತೋರ್ವ ಖ್ಯಾತ ನಟಿಯೊಂದಿಗೆ ವಿಜಯ್ ಹೆಸರು ತಳುಕು ಹಾಕಿಕೊಂಡಿದ್ದು, ಆಗಾಗ ಸಾಮಾಜಿಕ ಜಲತಾಣಗಳಲ್ಲಿ ಈ ಬಗ್ಗೆ ಚರ್ಚೆಯಾಗುತ್ತಲೇ ಇತ್ತು.
ಆದರೆ ವಿಜಯ್ ಆಗಲಿ ಅಥವಾ ಪತ್ನಿ ಸಂಗೀತಾ ಆಗಲಿ ಈ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಮಾತನಾಡಿರಲಿಲ್ಲ. ಅಲ್ಲದೇ ನಟಿ ಕೂಡ ಈ ವಿಚಾರವನ್ನು ಅಲ್ಲಗಳೆಯುತ್ತಲೇ ಇದ್ದರು.
ಆದರೆ ಈಗ ವಿಜಯ್ ಪತ್ನಿ ಸಂಗೀತಾ ವಿಚ್ಛೇದನಕ್ಕಾಗಿ ಚೆನ್ನೈ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವುದು ವಿಜಯ್ ಹಾಗೂ ಸಂಗೀತಾ ದಾಂಪತ್ಯ ಜೀವನದಲಿ ಎಲ್ಲವೂ ಸರಿಯಿಲ್ಲ ಎಂಬುದು ಸ್ಪಷ್ಟವಾದಂತಿದೆ.




