Ad imageAd image

ಹಿಟ್ & ರನ್ ಗೆ ಒಂದೇ ಬೈಕ್ ನಲ್ಲಿದ್ದ ಮೂವರು ಬಲಿ

Bharath Vaibhav
ಹಿಟ್ & ರನ್ ಗೆ ಒಂದೇ ಬೈಕ್ ನಲ್ಲಿದ್ದ ಮೂವರು ಬಲಿ
WhatsApp Group Join Now
Telegram Group Join Now

ರಾಯಚೂರು: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ಈ ಅಪಘಾತ ಸಂಭವಿಸಿದೆ.ಮೃತರನ್ನು ಮೊಹಮದ್ ಅಲಿ, ಫಯಾಜ್ ಮತ್ತು ನೂರ್ ಅಹಮದ್ ಎಂದು ಗುರುತಿಸಲಾಗಿದೆ. ಈ ಮೂವರು ಯುವಕರು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಟ್ರಕ್ ಹೈದರಾಬಾದ್ ಮಾರ್ಗದಿಂದ ಮಂತ್ರಾಲಯದ ಕಡೆಗೆ ಹೊರಟಿತ್ತು. ಬಸವೇಶ್ವರ ವೃತ್ತದ ಬಳಿ ಬರುತ್ತಿದ್ದಂತೆ ಯುವಕರಿದ್ದ ಬೈಕ್‌ಗೆ ಟ್ರಕ್ ಭೀಕರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಮೂವರೂ ಯುವಕರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಎಚ್ಚೆತ್ತ ಟ್ರಕ್ ಚಾಲಕ, ವಾಹನವನ್ನು ನಿಲ್ಲಿಸದೆ ಟ್ರಕ್ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪರಾರಿಯಾಗಿರುವ ಟ್ರಕ್ ಹಾಗೂ ಅದರ ಚಾಲಕನಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!