ಬೆಂಗಳೂರು: ರಾಜ್ಯದಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗಾಗಿ ಒತ್ತಾಯ ಹೆಚ್ಚಾಗಿದೆ. ಈ ಮಸೂದೆಗೂ ಕೆಲ ದಿನಗಳ ಹಿಂದಷ್ಟೇ ರಾಜ್ಯಪಾಲರು ಅಂಕಿತ ಸೂಚಿಸಿದ್ದರು.
ಈ ಬೆನ್ನಲ್ಲೇ ಮಾರ್ಚ್.15 ಒಳಗಾಗಿ ಒಳಮೀಸಲಾತಿ ಜಾರಿಗೊಳಿಸದೇ ಇದ್ದರೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಿಸಿದ್ದಾರೆ.
ಇಂದು ಬೆಂಗಳೂರಿನ ರಾಜ್ಯಮಟ್ಟದ ಹೋರಾಟಗಾರರ ಸಭೆಯಲ್ಲಿ ಪಾಲ್ಗೊಂಡ ಅವರು, ರಾಜ್ಯ ಸರ್ಕಾರದಿಂದ ಎಸ್ಸಿ ಎಸ್ಟಿ ಸಮುದಾಯದವರಿಗೆ ಒಳಮೀಸಲಾತಿ ಜಾರಿಗೊಳಿಸೋ ಸಂಬಂಧ ಅಂತಿಮ ಹಂತದ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ರಾಜ್ಯಪಾಲರು ಮಸೂದೆಗೆ ಅಂಕಿತ ಹಾಕಿರೋದನ್ನು ಸಭೆಯಲ್ಲಿದ್ದವರ ಗಮನಕ್ಕೆ ತಂದರು.
ಇದೇ ವೇಳೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಒಳಮೀಸಲಾತಿಯನ್ನು ಶೀಘ್ರವೇ ಜಾರಿಗೊಳಿಸಬೇಕು ಎಂಬುದು ಎಲ್ಲರ ಒತ್ತಾಯವಾಗಿದೆ. ನಾನು ಕೂಡ ಒಳಮೀಸಲಾತಿಗಾಗಿ ಒತ್ತಾಯಿಸುತ್ತೇನೆ.
ಮಾರ್ಚ್.15ರ ಒಳಗಾಗಿ ರಾಜ್ಯದಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೊಳಿಸದೇ ಇದ್ದರೇ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಇದೇ ಸಂದರ್ಭದಲ್ಲಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ ಮಾಡಿದರು.




