Ad imageAd image

ಗೃಹಲಕ್ಷ್ಮಿ ಫಲಾನುಭವಿಗಳಿಗೆ ವರ್ಷಕ್ಕೆ ಎರಡು ಸೀರೆ ವಿತರಣೆಗೆ ಸಿದ್ಧತೆ : ಬಜೆಟ್‌ನಲ್ಲಿ ಘೋಷಣೆ ಸಾಧ್ಯತೆ

Bharath Vaibhav
ಗೃಹಲಕ್ಷ್ಮಿ ಫಲಾನುಭವಿಗಳಿಗೆ ವರ್ಷಕ್ಕೆ ಎರಡು ಸೀರೆ ವಿತರಣೆಗೆ ಸಿದ್ಧತೆ : ಬಜೆಟ್‌ನಲ್ಲಿ ಘೋಷಣೆ ಸಾಧ್ಯತೆ
WhatsApp Group Join Now
Telegram Group Join Now

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ಮಾಸಿಕ ತಲಾ ಎರಡು ಸಾವಿರ ರೂಪಾಯಿ ವರ್ಗಾವಣೆ ಮಾಡಲಾಗುತ್ತಿದೆ.

ಈ ಯೋಜನೆ ಫಲಾನುಭವಿ ಮಹಿಳೆಯರಿಗೆ ವರ್ಷಕ್ಕೆ ಎರಡು ಸೀರೆಗಳನ್ನು ನೀಡುವ ಯೋಜನೆಯನ್ನು ಘೋಷಿಸುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಬಜೆಟ್ ಮಂಡಿಸಲಿದ್ದು, ಬಜೆಟ್ ನಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಹಕಾರ ಸಂಘಗಳ ಮೂಲಕ ಸೀರೆ ವಿತರಣೆ ಮಾಡುವ ಯೋಜನೆ ಬಗ್ಗೆ ಘೋಷಿಸುವ ಸಾಧ್ಯತೆ ಇದೆ.

ಇದರೊಂದಿಗೆ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಇಂದಿರಾ ಆಹಾರ ಕಿಟ್ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!