Ad imageAd image

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಗಳು ಪತ್ತೆ : ತನಿಖೆಗೆ ಖಾದರ್ ಆದೇಶ 

Bharath Vaibhav
ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಗಳು ಪತ್ತೆ : ತನಿಖೆಗೆ ಖಾದರ್ ಆದೇಶ 
WhatsApp Group Join Now
Telegram Group Join Now

ಮಂಗಳೂರು: ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಗಳು ಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿರುವ ಘಟನೆ ಮಂಗಳೂರಿನ ಪುದು ಗ್ರಾಮದ ಫರಂಗಿಪೇಟೆಯಲ್ಲಿ ನಡೆದಿದೆ.

ಇಲ್ಲಿನ ನೇತ್ರಾವತಿ ನದಿ ತೀರದಲ್ಲಿ ಎಲೆಂದರಲ್ಲಿ ಆಧಾರ್ ಕಾರ್ಡ್ ಗಳು ಪತ್ತೆಯಾಗಿವೆ, ನದಿ ನೀರಿನಲ್ಲಿ ತೇಲಿಬಮ್ದು ದಡದಲ್ಲಿ ಬಿದ್ದಿವೆ.ಇದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪಂಚಾಯತ್ ಅಧ್ಯಕ್ಷರು, ಸಾರ್ವಜನಿಕರ ಜೊತೆಗೂಡಿ ನೂರಾರು ಆಧಾರ್ ಕಾರ್ಡ್‌ಗಳನ್ನು ಸಂಗ್ರಹಿಸಿದ್ದಾರೆ. ಅಂಚೆ ಇಲಾಖೆಯಿಂದ ಸರಿಯಾದ ವಿಳಾಸಕ್ಕೆ ಆಧಾರ್ ಕಾರ್ಡ್ ತಲುಪುತ್ತಿಲ್ಲವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಕುಟುಂಬದವರ ಎಲ್ಲರ ಅಧಾರ್​​ ಕಾರ್ಡ್​​ ನದಿಯಲ್ಲಿ ಸಿಕ್ಕಿದೆ. ಗ್ರಾಮದ ನೂರಾರು ಜನರ ಕಾರ್ಡ್​ಗಳು ಸಹ ಇದರಲ್ಲಿವೆ. ಹಣ ಪಾವತಿಸಿ ವಿಳಾಸ, ಹೆಸರು ಬದಲಾವಣೆ ಮಾಡಿಸಿದವರು ಪರಿಷ್ಕೃತ ಕಾರ್ಡ್​​ ಈಗ ಬರಬಹುದು, ಆಗ ಬರಬಹುದು ಎಂದು ಕಾಯುತ್ತಿದ್ದಾರ .ಅವೆಲ್ಲವೂ ಈಗ ನದಿ ನೀರಲ್ಲಿ ತೇಲಿಬರುತ್ತಿರೋದು ಕಂಡುಬಂದಿದೆ. ಅಧಿಕಾರಿಗಳ ಬೇಜವಾಬ್ದಾರಿಯಿಂದಲೇ ಈ ಘಟನೆ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೆಕು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನದಿ ತೀರದಲ್ಲಿ ಆಧಾರ್ ಕಾರ್ಡ್‌ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು? ಮತ್ತು ಇದಕ್ಕೆ ಕಾರಣರಾದವರು ಯಾರೆಂಬುದನ್ನು ತನಿಖೆ ನಡೆಸಿ ಪತ್ತೆ ಹಚ್ಚಿ ತಮ್ಮ ಇಲಾಖೆಯ ಮುಖಾಂತರ ಕೂಡಲೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಯು.ಐ.ಡಿ.ಎ.ಐ ಯೋಜನಾ ವ್ಯವಸ್ಥಾಪಕರಿಗೆ ವಿಧಾನ ಸಭೆ ಸ್ಪೀಕರ್​​ ಮತ್ತು ಸ್ಥಳೀಯ ಶಾಸಕ ಯು.ಟಿ. ಖಾದರ್​​ ಸೂಚಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!