Ad imageAd image

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ

Bharath Vaibhav
16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ
WhatsApp Group Join Now
Telegram Group Join Now

ಬೆಂಗಳೂರು : 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ ಮಾಡುವ ಬಗ್ಗೆ ಬಜೆಟ್ ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.ಈ ಕುರಿತು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ.

ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಘೋಷಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!