Ad imageAd image

ಕರ್ನಾಟಕ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ

Bharath Vaibhav
ಕರ್ನಾಟಕ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ
WhatsApp Group Join Now
Telegram Group Join Now

ಬೆಂಗಳೂರು : ಕರ್ನಾಟಕ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ ನಿಡಿದ್ದಾರೆ. ಬಿಜೆಪಿ ವಿಧಾನ ಪರಿಷತ್ ಚುನಾವಣೆಗೆ ಮಂಗಳವಾರ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಟಿಕೆಟ್ ಆಕಾಂಕ್ಷಿಯಾಗಿದ್ದ ಲಿಂಗರಾಜ್ ಪಾಟೀಲ್‌ಗೆ ಟಿಕೆಟ್ ಕೈ ತಪ್ಪಿ ನಿರಾಸೆಯಾಗಿತ್ತು.

 

ಹುಬ್ಬಳ್ಳಿಯಲ್ಲಿ ಮಾತನಾಡಿದ ಲಿಂಗರಾಜ್ ಪಾಟೀಲ್, “ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದ ಕಾರಣ ಬೇಸರವಾಗಿದೆ. ಹೀಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ಹೇಳಿದ್ದಾರೆ.

ಬಿಜೆಪಿ ಮಂಗಳವಾರ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಪಶ್ಚಿಮ ಪದವೀಧರ ಕ್ಷೇತ್ರದ ಟಿಕೆಟ್‌ಗೆ ಲಿಂಗರಾಜ್ ಪಾಟೀಲ್ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಎಸ್.ವಿ.ಸಂಕನೂರ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು.

“ನಾನು ಪಶ್ಚಿಮ ಪದವೀಧರ ಕ್ಷೇತ್ರದ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ನನ್ನನ್ನು ಕಡೆಗಣಿಸಲಾಗಿದೆ. ಇದರಿಂದ ನೋವಾಗಿದೆ, ಹೀಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ಬಿಡುಗಡೆಗೊಳಿಸಿ ಎಂದು ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ” ಎಂದು ಲಿಂಗರಾಜ್ ಪಾಟೀಲ್ ಹೇಳಿದ್ದಾರೆ.

ಲಿಂಗರಾಜ್ ಪಾಟೀಲ್ ರಾಜೀನಾಮೆ ಪತ್ರ: ಲಿಂಗರಾಜ್ ಪಾಟೀಲ್ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರವನ್ನು ಬರೆದಿದ್ದಾರೆ. ಈ ಪತ್ರದಲ್ಲಿ ರಾಜೀನಾಮೆಗೆ ಕಾರಣವನ್ನು ವಿವರಿಸಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!