ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ತಳಹಂತದಿಂದಲೇ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ.
2025-26ನೇ ಸಾಲಿನ ಬಜೆಟ್ ಘೋಷಣೆಯಂತೆ, ರಾಜ್ಯದ ಒಟ್ಟು 4,056 ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಎಲ್ಕೆಜಿ (LKG) ಮತ್ತು ಯುಕೆಜಿ (UKG) ವಿಭಾಗಗಳನ್ನು ಯಶಸ್ವಿಯಾಗಿ ಆರಂಭಿಸಲಾಗಿದೆ.
ಈ ಯೋಜನೆಯ ಮೂಲಕ ಬಡ ಕುಟುಂಬಗಳ ಮಕ್ಕಳಿಗೆ ಬಾಲ್ಯದಲ್ಲಿಯೇ ಗುಣಮಟ್ಟದ ಶಿಕ್ಷಣದ ಬುನಾದಿ ದೊರೆಯಲಿದ್ದು, ಮುಂದಿನ ದಿನಗಳಲ್ಲಿ ಉಳಿದ ಶಾಲೆಗಳಿಗೂ ಈ ಸೌಲಭ್ಯವನ್ನು ವಿಸ್ತರಿಸಲು ಶಿಕ್ಷಣ ಇಲಾಖೆ ಯೋಜಿಸಿದೆ.




