Ad imageAd image

ಬಿಕ್ಲು ಶಿವ ಕೊಲೆ ಕೇಸ್ : ಶಾಸಕ ಭೈರತಿ ಬಸವರಾಜ್’ಗೆ ಜಾಮೀನು ಮಂಜೂರು

Bharath Vaibhav
ಬಿಕ್ಲು ಶಿವ ಕೊಲೆ ಕೇಸ್ : ಶಾಸಕ ಭೈರತಿ ಬಸವರಾಜ್’ಗೆ ಜಾಮೀನು ಮಂಜೂರು
WhatsApp Group Join Now
Telegram Group Join Now

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಶಾಸಕ ಭೈರತಿ ಬಸವರಾಜ್ ಅವರಿಗೆ ಜಾಮೀನು ಮಂಜೂರು ಮಾಡಿದೆ.ಬಿಕ್ಲುಶಿವ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ಭೈರತಿ ಬಸವರಾಜ್ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು.

ಬಸವರಾಜ್ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಭೈರತಿ ಬಸವರಾಜ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

2 ಲಕ್ಷ ರೂ.ಬಾಂಡ್, ಇಬ್ಬರು ಶ್ಯೂರಿಟಿ ಮೇಲೆ ಜಾಮೀನು ಮಝೂರು ಮಾಡಿದ್ದು, ಕೆಲ ಷರತ್ತುಗಳನ್ನು ಕೋರ್ಟ್ ವಿಧಿಸಿದೆ.

ಸಾಕ್ಷ್ಯ ನಾಶ ಮಾಡುವಂತಿಲ್ಲ. ಕೋರ್ಟ್ ಅನುಮತಿ ಇಲ್ಲದೇ ಹೊರಗಡೆ ಹೋಗುವಂತಿಲ್ಲ. ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವಂತಿಲ್ಲ ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿದೆ.

ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಶಾಸಕ ಭೈರತಿ ಬಸವರಾಜ್ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಕಿತ್ತಗನೂರಿನ ಜಮೀನು ವಿವಾದದ ಹಿನ್ನೆಲೆಯಲ್ಲಿ ಕಳೆದ ವರ್ಷ ಜುಲೈ 15 ರಂದು ದುಷ್ಕರ್ಮಿಗಳ ಗುಂಪೊಂದು ಮಾಜಿ ರೌಡಿ ಶೀಟರ್ ಬಿಕ್ಲು ಶಿವನನ್ನು ಮಚ್ಚು, ಲಾಂಗ್​ಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು.

ಮೃತನ ತಾಯಿ ಭೈರತಿ ಬಸವರಾಜ್​​ ಸೇರಿದಂತೆ ಹಲವರ ಮೇಲೆ ದೂರು ನೀಡಿದ್ದರು. ತನ್ನ ಮಗನ ಕೊಲೆ ಹಿಂದೆ ಭೈರತಿ ಬಸವರಾಜ್ ಕೈವಾಡ ಇದೆ ಅಂತಾ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

ಎ1 ಜಗದೀಶ್ ಜೊತೆ ಶಾಸಕರಿಗೆ ನಂಟು ಇದೆ ಎಂಬ ಆರೋಪವಿದ್ದು, ಕೊಲೆ ಕೇಸ್‌ನಲ್ಲಿ ಭೈರತಿ ಬಸವರಾಜ್ A5 ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಬಂಧನಕ್ಕಾಗಿ ಪೊಲೀಸರು ಹುಡುಕುತ್ತಿದಂತೆ ಶಾಸಕರು ತಲೆಮರೆಸಿಕೊಂಡಿದ್ದರು. ಬಳಿಕ ಕೆಂಪೇಗೌಡ ಏರ್ ಪೋರ್ಟ್ ಗೆ ಬಂದಿಳಿಯುತ್ತಿದ್ದಂತೆ ಶಾಸಕ ಭೈರತಿ ಬಸವರಾಜ್ ಅವರನ್ನು ಪೊಲೀಸರು ಬಂಧಿಸಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!