ಕಲಬುರಗಿ : ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಡಿಸಿಸಿ ಬ್ಯಾಂಕ್ ನಲ್ಲಿ ರೈತರಿಗೆ ಮೋಸ ಮಾಡಿ ಅವರಿಗೆ ಗೊತ್ತಿಲ್ಲದೆ ಅವರ ಹೆಸರಿನಲ್ಲಿ ಸಾಲ ಮಂಜೂರು ಮಾಡಿ ನಂತರ ಅನ್ಯಮಾರ್ಗದಿಂದ ರೈತರ ಖಾತೆಯಲ್ಲಿರುವ ಹಣ ದುರ್ಬಳಕೆ ಮಾಡಿಕೊಂಡಿರುವ ಅಫಜಲಪುರ ತಾಲೂಕಿನ ಡಿಸಿಸಿ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನಿನ ಕ್ರಮ ಕೈಗೊಂಡು ಅವರು ಲೂಟಿ ಮಾಡಿರುವ ಹಣವನ್ನು ಸಂಬಂಧಪಟ್ಟ ರೈತರ ಖಾತೆಗೆ ಜಮಾ ಮಾಡಬೇಕೆಂದು ಒತ್ತಾಯಿಸಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಬಸವರಾಜ ಕೊರಳ್ಳಿ ಅವರ ನೇತೃತ್ವದಲ್ಲಿ ಡಿಸಿಸಿ ಬ್ಯಾಂಕ್ ಎದುರುಗಡೆ ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆಯನ್ನು ನಗರದ ಜಗತ್ ವೃತ್ತದಿಂದ ಜಿಲ್ಲೆಯ ಡಿಸಿಸಿ ಬ್ಯಾಂಕ್ ವರೆಗೆ ಮಾಡಿದರು.
ಕಲಬುರಗಿ ಜಿಲ್ಲೆಯ ಡಿಸಿಸಿ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಪವನ್ ಕುಮಾರ್ ಅವರ ಶವಯಾತ್ರೆ ಮಾಡುವುದರ ಮೂಲಕ ಹೋರಾಟ ಮಾಡಿದರು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಬಸವರಾಜ ಕೊರಳ್ಳಿ, ಉಪಾಧ್ಯಕ್ಷರಾದ ವರದಸ್ವಾಮಿ ಬಿ ಹಿರೇಮಠ, ಜಿಲ್ಲಾ ಕಾರ್ಯದರ್ಶಿ ಅರುಣಕುಮಾರ್ ನಾಮದಾರ, ಶರಣು ಕುಲಕರ್ಣಿ, ರಾಹುಲ್ ಹಂಚಾಟೆ, ಸಂದೀಪ್ ಭೀಮಳ್ಳಿ, ಅಫಜಲಪುರ ತಾಲೂಕು ಅಧ್ಯಕ್ಷರಾದ ಸದಾಶಿವ ಛತ್ರಿ, ಆಳಂದ ತಾಲೂಕು ಅಧ್ಯಕ್ಷರಾದ ನಾಗರಾಜ್ ಘೋಡಕೆ, ಸೇಡಂ ತಾಲೂಕು ಅಧ್ಯಕ್ಷರಾದ ಅಶೋಕ್ ಮಡಿವಾಳ, ಮುತ್ತು ಕರಿಮಣಿ, ವಿಕ್ರಂ, ದಯಾನಂದ ಪಾಟೀಲ್, ಸೋಮಯ್ಯ ಸ್ವಾಮಿ, ಬಾಬುರಾವ್ ಕೋರೆ, ನೀಲಕಂಠ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್.




