ರಾಮಾಯಣ-೨ ಚಿತ್ರೀಕರಣ ಮುಂಬೈನಲ್ಲಿ ಪ್ರಾರಂಭವಾಗಿದೆ. ಹೆಸರಾಂತ ಬಾಲಿವುಡ್ ನಟ ರಣಬೀರ ಕಫೂರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಚಿತ್ರದಲ್ಲಿ ರಣಬೀರ್ ರಾಮನ ಪಾತ್ರ ನಿಭಾಯಿಸುತ್ತಿದ್ದಾರೆ. ನಿತೇಶ್ ತಿವಾರಿ ನರ‍್ದೇಶನದ ಈ ಚಿತ್ರದ ಚಿತ್ರೀಕರಣ ಬಹು ದಿನಗಳಿಂದ ನಿರೀಕ್ಷೆಯಲ್ಲಿತ್ತು.
ಈ ಚಿತ್ರದಲ್ಲಿ ಯಶ್ ಅವರು ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ.




