Ad imageAd image

ಕಾಂಗ್ರೆಸ್ ನ ವಸೂಲಿವಾಲಾ,ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ : ಜೆಡಿಎಸ್ ವಾಗ್ದಾಳಿ

Bharath Vaibhav
ಕಾಂಗ್ರೆಸ್ ನ ವಸೂಲಿವಾಲಾ,ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ : ಜೆಡಿಎಸ್ ವಾಗ್ದಾಳಿ
WhatsApp Group Join Now
Telegram Group Join Now

ಬೆಂಗಳೂರು : ಕರ್ನಾಟಕದಲ್ಲಿ ಏಪ್ರಿಲ್ 9ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಈಗಾಗಲೇ ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ಇನ್ನು ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರವಾಗಿ ಗೊಂದಲದಲ್ಲಿದೆ.

ಇನ್ನು ಉಪಚುನಾವಣೆಗೆ ಹಿನ್ನಲೆ ರಾಜ್ಯಕ್ಕೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಆಗಮಿಸಲಿದ್ದು, ಚುನಾವಣಾ ಪ್ರಚಾರ ಸೇರಿದಂತೆ ಹಲವು ವಿಚಾರಗಳ ಜೊತೆ ಸಿಎಂ ಡಿಸಿಎಂ ಜೊತೆ ಚರ್ಚಿಸಲಿದ್ದಾರೆ.

ಇನ್ನು ಈ ವಿಚಾರವಾಗಿ ಜೆಡಿಎಸ್ ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೇರಳ, ತಮಿಳುನಾಡು, ಅಸ್ಸಾಂ, ಪುದುಚೇರಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೆ ವಿಧಾನಸಭಾ ಚುನಾವಣಾ ದಿನಾಂಕ ಘೋಷಣಾದ ಬೆನ್ನಲ್ಲೇ @INCIndia ಕಲೆಕ್ಷನ್ ಏಜೆಂಟ್, ಕರ್ನಾಟಕದ ಸೂಪರ್ ಸಿಎಂ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಬರುತ್ತಿದ್ದಾರೆ!! ಹೈಕಮಾಂಡ್ ಗುಲಾಮಗಿರಿಯಲ್ಲಿ ತೊಡಗಿರುವ ಇಲ್ಲಿನ @INCKarnataka ಪಟಾಲಂ ಮತ್ತು ಡಿಸಿಎಂ @DKShivakumar ಕರ್ನಾಟಕವನ್ನು ಎಟಿಎಂ ಮಾಡಿಕೊಂಡು, ಹೈಕಮಾಂಡ್ ಖಜಾನೆ ತುಂಬಿಸಲು ಜನರ ತೆರಿಗೆ ಹಣವನ್ನು ಲೂಟಿ ಹೊಡೆಯುತ್ತಿದ್ದಾರೆ.

ಕಳೆದ ಬಾರಿ ವಾಲ್ಮೀಕಿ ನಿಗಮದಲ್ಲಿ ನೂರಾರು ಕೋಟಿ ರೂ. ದೋಚಿ ತೆಲಂಗಾಣ ರಾಜ್ಯದಲ್ಲಿ ಅಕ್ರಮವಾಗಿ ಚುನಾವಣೆ ನಡೆಸಿದ್ದ ಕಾಂಗ್ರೆಸ್, ಈಗ ರಾಜ್ಯದ ಯಾವ ನಿಗಮ- ಮಂಡಳಿಗಳಲ್ಲಿ ದರೋಡೆಗೆ ಸಂಚು ರೂಪಿಸಿದೆ ಎಂಬ ಅನುಮಾನ ಎಲ್ಲರನ್ನು ಕಾಡುತ್ತಿದೆ. ಕಮಿಷನ್’ಗಾಗಿ ಗುತ್ತಿಗೆದಾರರ ರಕ್ತ ಹೀರುತ್ತಿರುವ, ಜನರಿಗೆ ಬೆಲೆ ಏರಿಕೆ ಮತ್ತು ತೆರಿಗೆ ಬರೆ ಎಳೆಯುತ್ತ ವಸೂಲಿಗಿಳಿದಿರುವ ಕಮಿಷನ್ ಕಾಂಗ್ರೆಸ್ ಸರ್ಕಾರದ ಬಗ್ಗೆ ರಾಜ್ಯದ ಜನರೆ ಎಚ್ಚರ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!