Ad imageAd image

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಇಲ್ಲ : ರಾಮಲಿಂಗಾ ರೆಡ್ಡಿ

Bharath Vaibhav
ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಇಲ್ಲ : ರಾಮಲಿಂಗಾ ರೆಡ್ಡಿ
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಆರ್‌ಸಿಎಲ್ (BMTC) ಸೇರಿದಂತೆ ಸರ್ಕಾರಿ ಬಸ್‌ಗಳ ಟಿಕೆಟ್ ದರ ಏರಿಕೆಯಾಗಲಿದೆ ಎಂಬ ವದಂತಿಗಳಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತೆರೆ ಎಳೆದಿದ್ದಾರೆ. ಸದ್ಯಕ್ಕೆ ಬಸ್ ಪ್ರಯಾಣ ದರವನ್ನು ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಯುದ್ಧದ ಪರಿಣಾಮದಿಂದ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದೆ, ಆದರೆ ಸದ್ಯಕ್ಕೆ ಟಿಕೆಟ್ ದರ ಏರಿಸಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಬಸ್ ದರ ಏರಿಕೆಯಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದ್ದವು. ಇದನ್ನು ಸುಳ್ಳು ಎಂದು ಕರೆದಿರುವ ಸಚಿವರು, ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

ಈ ಸಮಿತಿಯು ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ಥಿತಿಗತಿ, ಡೀಸೆಲ್ ಬೆಲೆ ಏರಿಕೆ ಮತ್ತು ನಿರ್ವಹಣಾ ವೆಚ್ಚಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ನೀಡಲಿದೆ. ಸಮಿತಿಯ ಶಿಫಾರಸಿನ ಆಧಾರದ ಮೇಲೆ ಮಾತ್ರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಸಾರಿಗೆ ಸಂಸ್ಥೆಗಳು ಆರ್ಥಿಕ ಸಂಕಷ್ಟದಲ್ಲಿದ್ದರೂ, ಸಾರ್ವಜನಿಕರ ಹಿತದೃಷ್ಟಿಯಿಂದ ಸದ್ಯಕ್ಕೆ ಯಾವುದೇ ಟಿಕೆಟ್ ದರ ಹೆಚ್ಚಳ ಮಾಡದಿರಲು ಸರ್ಕಾರ ನಿರ್ಧರಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!