ಸೇಡಂ: ಪಟ್ಟಣದ ಈದ್ಗಾ ಮೈದಾನದಲ್ಲಿ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ನಡೆದ ಸಾಮೂಹಿಕ ಪ್ರಾರ್ಥನೆ ನಂತರ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.
ಸುಧೀರ್ಘ ಒಂದು ತಿಂಗಳುಗಳ ಕಾಲ ಅಲ್ಲಾಹನ ನಾಮದಲ್ಲಿ ಉಪವಾಸಗೈದು ರಂಜಾನ್ ದಿನದಂದು ಅತ್ಯಂತ ಸಂಭ್ರಮದಿಂದ ಹಬ್ಬ ಆಚರಿಸಲಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು. ಈ ವೇಳೆ ಸ್ನೇಹ, ಸೌಹಾರ್ದತೆಯ ಮೂಲಕ ಒಬ್ಬರಿಗೊಬ್ಬರು ಹಸ್ತಲಾಘವ ಮಾಡುವ ಮೂಲಕ ರಂಜಾನ್ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಸೇಡಂ ಮತಕ್ಷೇತ್ರದ ಮುಖಂಡರು ಹಾಗೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್




