ಬೆಳಗಾವಿ: ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 12 ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ಯಾಟಿ ಓಣಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ರಸಗೊಬ್ಬರ ಅಂಗಡಿ, ಹೊಟೆಲ್, ಫೋಟೋ ಸ್ಟೂಡಿಯೋ, ಐಸ್‌ಕ್ರೀಂ ಅಂಗಡಿಗಳು, ರೈತರ ನೀರಾವರಿ ಸಂಘದ ಕಚೇರಿ ಸೇರಿದಂತೆ ಹಲವು ವ್ಯಾಪಾರ ಮಳಿಗೆಗಳು ಬೆಂಕಿಗಾಹುತಿಯಾಗಿವೆ.




