ಬೆಂಗಳೂರು: ಹೊಸ ಹಣಕಾಸು ವರ್ಷ (2026-27) ಆರಂಭವಾಗುತ್ತಿದ್ದಂತೆ ರಾಜ್ಯದ ವಾಹನ ಸವಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಕರ್ನಾಟಕದ ಒಟ್ಟು 9 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಪರಿಷ್ಕರಿಸಿದ್ದು, ಏಪ್ರಿಲ್ 1ರಿಂದ ಹೊಸ ದರಗಳು ಜಾರಿಗೆ ಬರಲಿವೆ.ವಿಶೇಷವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವವರಿಗೆ ಹೆಚ್ಚಿನ ಹೊರೆಯಾಗಲಿದೆ.
ದರ ಏರಿಕೆಯಾಗಿರುವ ಇತರ ಪ್ರಮುಖ ರಸ್ತೆಗಳು:
ಬೆಂಗಳೂರು-ಮೈಸೂರು ರಸ್ತೆ ಮಾತ್ರವಲ್ಲದೆ, ಈ ಕೆಳಗಿನ ಮಾರ್ಗಗಳಲ್ಲೂ ಟೋಲ್ ಹೆಚ್ಚಳವಾಗಲಿದೆ:
ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ.
ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ.
ಹೊಸೂರು ರಸ್ತೆ (ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್).
ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ.
ಬೆಂಗಳೂರು ವಿಮಾನ ನಿಲ್ದಾಣ ರಸ್ತೆ (ಸಾದಹಳ್ಳಿ ಟೋಲ್).




