ಬೆಂಗಳೂರು: ಐಪಿಎಲ್ ೨೦೨೬ ಆರಂಭಕ್ಕೆ ಇನ್ನು ಕೇವಲ ಎರಡೇ ದಿನ ಬಾಕಿ ಉಳಿದಿರುವ ಸಂದರ್ಭದಲ್ಲಿ ಆರ್‌ಸಿಬಿ ತಂಡದ ಹಿರಿಯ ಬ್ಯಾಟುಗಾರ ವಿರಾಟ್ ಕೊಹ್ಲಿ ಬುಧವಾರ ನಡೆದ ಎರಡನೇ ಅಭ್ಯಾಸ ಪಂದ್ಯದಲ್ಲಿ ಕೇವಲ ೧೯ ಎಸೆತಗಳಲ್ಲಿ ೪೫ ರನ್ ಗಳಿಸಿ ಉಳಿದ ತಂಡಗಳಿಗೆ ಎಚ್ಚರಿಕೆ ಘಂಟೆ ಬಾರಿಸಿದ್ದಾರೆ.
ಆರ್‌ಸಿಬಿ ತಂಡದ ಆಟಗಾರರ ನಡುವೆಯೇ ನಡೆದ ಎರಡನೇ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ್ದನ್ನು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ಐಪಿಎಲ್: ಅಭ್ಯಾಸ ಪಂದ್ಯದಲ್ಲಿ ವಿರಾಟ್ ಮಿಂಚಿನ ಬ್ಯಾಟಿಂಗ್




