ನವದೆಹಲಿ: ಲೋಕ ಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ದೇಶದ ಆರ್ಥಿಕ ಸ್ಥಿತಿಗತಿಗಳ ಕುರಿತು ತಿಳಿಯಲು ಸೂಕ್ತ ತರಬೇತಿಯ ಅಗತ್ಯವಿದೆ ಎಂದು ಬಿಜೆಪಿ ಸಂಸದೆ ಹಾಗೂ ಮಾಜಿ ಬಾಲಿವಡ್ ನಟಿ ಕಂಗನಾ ರಾವತ್ ಹೇಳಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಕಂಗನಾ ರಾವತ್ ಕಾಂಗ್ರೆಸ್ ಸರಕಾರವಿದ್ದಾಗ ಆದ ಆರ್ಥಿಕ ತಪ್ಪು ನಡೆಗಳಿಂದಾಗಿ ದೇಶದ ಆರ್ಥಿಕತೆ ಹಳಿ ತಪ್ಪಿತ್ತು. ಇಂದು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶದ ಆರ್ಥಿಕತೆಗೆ ಸುಸ್ಥಿರವಾಗಿದೆ. ಮೋದಿ ಸರಕಾರದ ಆರ್ಥಿಕ ನೀತಿಯ ಬಗ್ಗೆ ಟೀಕೆ ಮಾಡಲು ಹೊರಟಿರುವ ರಾಹುಲ್ ಗಾಂಧಿ ಅವರಿಗೆ ಸೂಕ್ತ ತರಬೇತಿಯ ಅಗತ್ಯವಿದೆ ಎಂದು ನೇರವಾಗಿ ರಾಹುಲ್ ಗಾಂಧಿ ಅವರ ವಿರುದ್ಧ ಕಂಗನಾ ರಾವತ್ ವಾಗ್ದಾಳಿ ನಡೆಸಿದರು.
ಆರ್ಥಿಕ ಸ್ಥಿತಿಗತಿ ತಿಳಿಯಲು ರಾಹುಲ್ ಗಾಂಧಿ ಅವರಿಗೆ ಸೂಕ್ತ ತರಬೇತಿಯ ಅಗತ್ಯವಿದೆ: ಕಂಗನಾ ರಾವತ್




