Ad imageAd image

ಪೊಲೀಸ್ ವಸತಿ ಗೃಹಗಳ ಉದ್ಘಾಟನಾ ಸಮಾರಂಭ

Bharath Vaibhav
ಪೊಲೀಸ್ ವಸತಿ ಗೃಹಗಳ ಉದ್ಘಾಟನಾ ಸಮಾರಂಭ
WhatsApp Group Join Now
Telegram Group Join Now

ಸಿಂಧನೂರು: ಪೊಲೀಸ್ ಉಪ ವಿಭಾಗದ, ನಗರ ಪೊಲೀಸ್ ಠಾಣೆಯ ಸಹಯೋಗಯೊಂದಿಗೆ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಕೆಕೆಆರ್ ಡಿಬಿ ಮೈಕ್ರೋ ಯೋಜನೆಯ 2024-25ನೇ ಸಾಲಿನಲ್ಲಿ ವಿಧಾನಸಭಾ ಶಾಸಕರ ಅನುದಾನದಲ್ಲಿ ನಗರದ ವ್ಯಾಪ್ತಿಯಲ್ಲಿ ಬರುವ ಮುಖ್ಯ ರಸ್ತೆ ಮತ್ತು ವಾರ್ಡ್ ನಂ1 ರಿಂದ ನಗರದ 31 ವಾರ್ಡ್ ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ನಿಗಮ ನಿಯಮಿತ ಅಡಿಯಲ್ಲಿ 12 ಪೊಲೀಸ್ ವಸತಿ ಗೃಹಗಳನ್ನು
ಉದ್ಘಾಟಿಸಿದ ಶಾಸಕ ಹಂಪನಗೌಡ ಬಾದರ್ಲಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಧಾನ ಪರಿಷತ್ ಶಾಸಕ ಬಸನಗೌಡ ಬಾದರ್ಲಿ ಮಾತನಾಡಿ ನಗರದಲ್ಲಿ 101ಸಿಸಿ ಕ್ಯಾಮರಾ ಅಳವಡಿಸುವ ಮೂಲಕ ನಗರದಲ್ಲಿ ನಡೆಯುವ ಅಪರಾಧ ಅಪಘಾತ ಅಕ್ರಮ ಚಟುವಟಿಕೆಗಳು, ಸಂಚಾರ ನಿಯಮ ಉಲ್ಲಂಘನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಗರ ಪೊಲೀಸ್ ಠಾಣೆಯಲ್ಲಿ ಕುಳಿತು ನಿಯಂತ್ರಣ ಮಾಡುವ ಜೊತೆಗೆ ಅವುಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ಸಿಸಿ ಕ್ಯಾಮರಾಗಳಿಂದ ಬಹಳಷ್ಟು ಉಪಯೋಗವಾಗಲಿದೆ ಎಸ್ಪಿ,ಅರುಣಾಂಶು ಗಿರಿ, ಡಿವೈಎಸ್ಪಿ ಚಂದ್ರಶೇಖರ ನಾಯಕ ಉತ್ತಮ ಕೆಲಸ ಮಾಡುತ್ತಿದ್ದು, ಡ್ರಗ್ಸ್ ಇಸ್ಪೀಟ್ ಓಸಿ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಮೂಲಕ ಯುವಕರ ಭವಿಷ್ಯವನ್ನು ಕಾಪಾಡಬೇಕು ತಾಲೂಕಿನಲ್ಲಿ ನಡೆಯುವ ಆಕ್ರಮ ಚಟುವಟಿಕೆಗಳು ನಿಯಂತ್ರಣ ಮಾಡುವ ಬಗ್ಗೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರದ ಸಿಎಂ ಹಾಗೂ ಡಿಸಿಎಂ ಹಾಗೂ ಗೃಹ ಸಚಿವರು12 ವಸತಿ ಗೃಹಗಳನ್ನು ಮಂಜೂರು ಮಾಡಿಸಿದ್ದಾರೆ. ರಾಜ್ಯ ಸರ್ಕಾರವು 5 ಗ್ಯಾರಂಟಿಗಳನ್ನು ಜನರಿಗೆ ಮುಟ್ಟಿಸುವ ಜೊತೆಗೆ ಪೊಲೀಸ್ ಇಲಾಖೆಗೆ ಬೇಕಾದ ಅನುದಾನ ನೀಡಲು ಸರ್ಕಾರ ಸಿದ್ದವಾಗಿದೆ ಎಂದರು.

ಎಸ್ಪಿ ಅರುಣಾಂಶು ಗಿರಿ ಮಾತನಾಡಿ, ಅಪಘಾತ ಅಪರಾಧ ಅಕ್ರಮ ಚಟುವಟಿಕೆಗಳನ್ನು ಕಡಿವಾಣ ಹಾಕಲು ನಗರದಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಇದಕ್ಕೆ ಸಹಕರಿಸಿ ಸಹಾಯ ಮಾಡಿದ ಶಾಸಕರಿಗೆ ಧನ್ಯವಾದಗಳನ್ನು ಸಲ್ಲಿಸಿ,
ಪೊಲೀಸರಿಗೆ 12 ವಸತಿ ಗೃಹಗಳನ್ನು ಹಿರಿಯತನದ ಆಧಾರದ ಮೇಲೆ ಈ 12 ವಸತಿ ಗ್ರಹಗಳ ಹಂಚಿಕೆ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ :ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ
ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಸುಡಾ ಸದಸ್ಯ ವೈ.ನರೇಂದ್ರನಾಥ, ಸೇರಿದಂತೆ ಇನ್ನಿತರೆ ಅಧಿಕಾರಿಗಳು ವೇದಿಕೆ ಮೇಲಿದ್ದರು.

ಈ ವೇಳೆ ಡಿವೈಎಸ್ಪಿ ಚಂದ್ರಶೇಖರ ಜಿ, ನಗರ ಪೊಲೀಸ್ ಠಾಣೆ ಪಿ.ಐ.ವೀರಾರೆಡ್ಡಿ, ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಚಂದ್ರಶೇಖರ ಹಿರೇಮಠ, ಬಳಗಾನೂರು ಪೊಲೀಸ್ ಠಾಣೆ ಪಿಎಸ್‌ಐ ಎರಿಯಪ್ಪ ಅಂಗಡಿ, ಸೇರಿದಂತೆ ಇನ್ನಿತರೆ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ;ಬಸವರಾಜ ಬುಕ್ಕನಹಟ್ಟಿ

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!