Ad imageAd image

1500ಕ್ಕೂ ಹೆಚ್ಚು ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ : ದಿನೇಶ್ ಗುಂಡೂರಾವ್

Bharath Vaibhav
1500ಕ್ಕೂ ಹೆಚ್ಚು ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ : ದಿನೇಶ್ ಗುಂಡೂರಾವ್
WhatsApp Group Join Now
Telegram Group Join Now

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 1500ಕ್ಕೂ ಹೆಚ್ಚು ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಮೆಡಿಕಲ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಭಾನುವಾರ ಏರ್ಪಡಿಸಿದ್ದ ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞರ ರಾಜ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 1500ಕ್ಕೂ ಹೆಚ್ಚು ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು.

ಸರ್ಕಾರಿ ಆಸ್ಪತ್ರೆಗಳಲ್ಲಿ ರಕ್ತ, ಮೂತ್ರದ ಪರೀಕ್ಷೆಗಳ ಪ್ರಯೋಗಾಲಯಗಳಿದ್ದು, ಹುದ್ದೆಗಳು ಖಾಲಿ ಇವೆ. ತಂತ್ರಜ್ಞರ ನೇಮಕಾತಿಗೆ ಗಮನ ಹರಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಯೋಗಾಲಯಗಳಲ್ಲಿ ಕಾರ್ಯನಿರ್ವಹಿಸುವ ವೇತನವನ್ನು ಕಾರ್ಮಿಕ ನಿಯಮಗಳಿಗೆ ಅನುಗುಣವಾಗಿ ಮಾಸಿಕ 18,225 ರೂ.ನಿಂದ 25,000ರೂ.ಗೆ ಹೆಚ್ಚಿಸಲು ಗಮನಹರಿಸುವುದಾಗಿ ಸಚಿವರು ಹೇಳಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!