ಬೆಳಗಾವಿ : ಬೀದಿ ನಾಯಿಗಳ ದಾಳಿಗೆ ಒಳಗಾಗಿ ಆಸ್ಪತ್ರೆಗೆ ಸೇರಿದ ವ್ಯಕ್ತಿ ಇದೀಗ ಕೋಮಾಗೆ ಜಾರಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಲ್ಲೋಳಿಹಟ್ಟಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬಸವರಾಜ್ ಹೆಬ್ಬಾಳಿ (18) ಎಂಬ ಯುವಕ ಬೀದಿ ನಾಯಿಯ ದಾಳಿಗೆ ತುತ್ತಗಿದ್ದು, ಇದೀಗ ಆತ ಕೋಮಾಗೆ ಜಾರಿದ್ದಾನೆ.
ಬೆಳಗಾವಿ ವೈದಿಕೀಯ ಕಾಲೇಜು ಆಸ್ಪತ್ರೆಯಲ್ಲಿ ಬಸವರಾಜನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಬೀದಿ ನಾಯಿಗಳ ದಾಳಿಗೆ ಒಳಗಾಗಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾನೆ.
ಬಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೋಮಾಗೆ ಜಾರಿದ್ದಾನೆ ಪ್ರತಿ ದಿನ ಜನರು ಬೀದಿ ನಾಯಿಗಳ ದಾಳಿ ಆತಂಕದಲ್ಲಿ ಬದುಕುತ್ತಿದ್ದಾರೆ. ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ.




