Ad imageAd image

ತೆರಿಗೆ ರಿಯಾಯಿತಿ ಘೋಷಣೆ ಮಾಡಿದ ಬೆಳಗಾವಿ ಮಹಾನಗರ ಪಾಲಿಕೆ

Bharath Vaibhav
ತೆರಿಗೆ ರಿಯಾಯಿತಿ ಘೋಷಣೆ ಮಾಡಿದ ಬೆಳಗಾವಿ ಮಹಾನಗರ ಪಾಲಿಕೆ
WhatsApp Group Join Now
Telegram Group Join Now

ಬೆಳಗಾವಿ: ಆಸ್ತಿ ತೆರಿಗೆ ಪಾವತಿಸುವವರಿಗೆ ಬೆಳಗಾವಿ ಮಹಾನಗರ ಪಾಲಿಕೆ ಸಿಹಿ ಸುದ್ದಿ ನೀಡಿದೆ. ಶೇ.5 ರಷ್ಟು ರಿಯಾಯಿತಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

2026-27ನೇ ಸಾಲಿನಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಸ್ತಿಗಳ ಆಸ್ತಿ ತೆರಿಗೆಯನ್ನು ಸಂಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಆಸ್ತಿ ತೆರಿಗೆ ಮೇಲೆ ಶೇ.5 ರಷ್ಟು ರಿಯಾಯಿತಿಯ ಸೌಲಭ್ಯವಿರುತ್ತದೆ.

ತೆರಿಗೆದಾರರಿಗೆ ತಮ್ಮ ಆಸ್ತಿ ತೆರಿಗೆಯನ್ನು ಆನ್‌ಲೈನ್ ಮೂಲಕ ಪಾವತಿಸುವ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ “Online Payment Integration of property tax” ಸಾಪ್ಟವೇರ್‌ನ್ನು ಪಾಲಿಕೆಯ ವತಿಯಿಂದ ಅಭಿವೃದ್ಧಿ ಪಡಿಸಲಾಗಿರುತ್ತದೆ.

ಆಸ್ತಿ ತೆರಿಗೆದಾರರು ಈಗಾಗಲೇ ತಮ್ಮ ಆಸ್ತಿ ತೆರಿಗೆಯ ಕುರಿತು PID Number ಇರುವ ಗಣಕೀಕೃತ ಫಾರ್ಮ-1 ಪಡೆದವರು ಬೆಳಗಾವಿ-1 ಕೇಂದ್ರಗಳಲ್ಲಿ ಹಾಗೂ Debit Card/Credit Card/Net Banking ಮೂಲಕವು ಆಸ್ತಿ ತೆರಿಗೆ ಪಾವತಿಸಬಹುದಾಗಿದೆ.

ಆನ್‌ಲೈನ್ ಮೂಲಕ ಆಸ್ತಿ ತೆರಿಗೆಯನ್ನು ಪಾವತಿಸುವ ವಿಧಾನಗಳು. ಆಸ್ತಿ ತೆರಿಗೆದಾರರು ಪಾಲಿಕೆಯ ವೆಬ್‌ಸೈಟ್ www.belagavicitycorp.org ಗೆ Visit ಮಾಡಬಹುದು ಎಂದು ತಿಳಿಸಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!