Ad imageAd image

ಇಂದು ರಾಜ್ಯದಾದ್ಯಂತ ಗುಡುಗು ಸಹಿತ ಮಳೆ : 15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್ ಘೋಷಣೆ

Bharath Vaibhav
ಇಂದು ರಾಜ್ಯದಾದ್ಯಂತ ಗುಡುಗು ಸಹಿತ ಮಳೆ : 15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್ ಘೋಷಣೆ
Rain
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಕೂಡ ರಾಜ್ಯದಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಾವೇರಿ, ಧಾರವಾಡ, ಬೆಳಗಾವಿ ಸೇರಿದಂತೆ ಒಟ್ಟು 15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯ ನಿರೀಕ್ಷೆಯಿದೆ.ರಾಜ್ಯದ ಒಟ್ಟು 15 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಯಾವ ಜಿಲ್ಲೆಗಳಲ್ಲಿ ಮಳೆ ?: ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಉಳಿದ ಭಾಗಗಳಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ವರದಿಯಾಗಿದೆ. ಒಟ್ಟಾರೆಯಾಗಿ, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಹವಾಮಾನ: ರಾಜಧಾನಿಯಲ್ಲಿ ಇಂದು ಮಿಶ್ರ ವಾತಾವರಣವಿರಲಿದೆ. ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು. ಸಂಜೆ ಅಥವಾ ರಾತ್ರಿಯ ವೇಳೆ ಶೇ. 10 ರಿಂದ 20 ರಷ್ಟು ಮಳೆಯಾಗುವ ಸಾಧ್ಯತೆ ಇದೆ.

ತಾಪಮಾನ ಏರಿಕೆ: ಮಳೆಯ ಮುನ್ಸೂಚನೆ ಇದ್ದರೂ, ಏಪ್ರಿಲ್ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚಿನ ತಾಪಮಾನ ಮತ್ತು ಬಿಸಿಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಹವಾಮಾನ ಇಲಾಖೆ ತಿಳಿಸಿದೆ.

 

 

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!