Ad imageAd image

ಮದುವೆಗೆ ಒಪ್ಪದ ಪ್ರೇಯಸಿ: ಪ್ರಿಯಕರ ಆತ್ಮಹತ್ಯೆ

Bharath Vaibhav
ಮದುವೆಗೆ ಒಪ್ಪದ ಪ್ರೇಯಸಿ: ಪ್ರಿಯಕರ ಆತ್ಮಹತ್ಯೆ
WhatsApp Group Join Now
Telegram Group Join Now

ಕೇಂದ್ರಾಪುರ: ತನ್ನ ಪ್ರೇಯಸಿ (ಹುಡುಗಿ) ತನ್ನನ್ನು ಮದುವೆ ಮಾಡಿಕೊಳ್ಳಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ೨೮ ವರ್ಷದ ಯುವಕನೋರ್ವ ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಗದೀಶಸಿಂಗಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗಾಂವ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪುರ ಗ್ರಾಮದ ರಾಖೇಶ್ ದಾಸ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶುಕ್ರವಾರ ಅವನಿರುವ ಕೊಠಡಿ ಲಾಕ್ ಆಗಿರುವುದನ್ನು ಗಮನಿಸಿದ ಕುಟುಂಬದ ಸದಸ್ಯರು ಕಿಟಕಿಯ ಮೂಲಕ ನೋಡಿದಾಗ ಫ್ಯಾನಿಗೆ ನೇಣು ಬೀಗಿದುಕೊಂಡಿದ್ದು ಕಂಡು ಬಂದಿದೆ. ತಕ್ಷಣ ಆತನನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!