Ad imageAd image

ಬೆಳಗಾವಿಯಲ್ಲಿ ಗೃಹ ಬಂಧನದಲ್ಲಿದ್ದ ಮಹಿಳೆಯ ರಕ್ಷಣೆ : ದೆಹಲಿಯಿಂದ ಬಂದ ಕರೆಗೆ ಅಕ್ಕ ಪಡೆ ತುರ್ತು ಸ್ಪಂದನೆ

Bharath Vaibhav
ಬೆಳಗಾವಿಯಲ್ಲಿ ಗೃಹ ಬಂಧನದಲ್ಲಿದ್ದ ಮಹಿಳೆಯ ರಕ್ಷಣೆ : ದೆಹಲಿಯಿಂದ ಬಂದ ಕರೆಗೆ ಅಕ್ಕ ಪಡೆ ತುರ್ತು ಸ್ಪಂದನೆ
WhatsApp Group Join Now
Telegram Group Join Now

ಬೆಳಗಾವಿ: ಪತಿಯಿಂದ ಮನೆಯಲ್ಲಿಯೇ ಬಂಧಿಯಾಗಿ ದೈಹಿಕ ಹಾಗೂ ಮಾನಸಿಕ ಹಿಂಸೆ ಅನುಭವಿಸುತ್ತಿದ್ದ ಮಹಿಳೆಯೊಬ್ಬರನ್ನು(Women) ಬೆಳಗಾವಿಯ ‘ಅಕ್ಕಪಡೆ’ (ಮಹಿಳಾ ಪೊಲೀಸ್ ತಂಡ) ಯಶಸ್ವಿಯಾಗಿ ರಕ್ಷಿಸಿದೆ. ಭಾನುವಾರ ಬೆಳಿಗ್ಗೆ ಈ ರಕ್ಷಣಾ ಕಾರ್ಯಾಚರಣೆ ನಡೆದಿದೆ.

ದೆಹಲಿಯಿಂದ ಬಂದ ದೂರವಾಣಿ ಮಾಹಿತಿಯ ಹಿನ್ನೆಲೆಯಲ್ಲಿ ಎಚ್ಚೆತ್ತ ಬೆಳಗಾವಿ ಮಹಿಳಾ ಪೊಲೀಸ್ ಠಾಣೆಯ ಅಕ್ಕಪಡೆ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾದರು. ಸ್ಥಳಕ್ಕೆ ತೆರಳಿದ ತಂಡವು, ಬೀಗ ಹಾಕಿದ್ದ ಮನೆಯ ಬಾಗಿಲು ತೆರೆಯಿಸಿ, ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ.

ರಕ್ಷಿಸಲ್ಪಟ್ಟ ಮಹಿಳೆಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಮತ್ತು ಆಶ್ರಯದ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯ ದೂರಿನ ಮೇರೆಗೆ ಪತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಹಿಳೆ ಮತ್ತು ಮಕ್ಕಳ ಸುರಕ್ಷತೆಯನ್ನು ಪರಿಗಣಿಸಿ, ಅವರನ್ನು ವಿಮಾನದ ಮೂಲಕ ದೆಹಲಿಯಲ್ಲಿರುವ ಅವರ ತವರು ಮನೆಗೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!