Ad imageAd image

ನಲ್ಲಗುಟ್ಟಪಲ್ಲಿಯಲ್ಲಿ ಶಾಸಕರ ನೇತೃತ್ವದ ಜನಸ್ಪಂದನ ಸಭೆ

Bharath Vaibhav
ನಲ್ಲಗುಟ್ಟಪಲ್ಲಿಯಲ್ಲಿ ಶಾಸಕರ ನೇತೃತ್ವದ ಜನಸ್ಪಂದನ ಸಭೆ
WhatsApp Group Join Now
Telegram Group Join Now

ಚೇಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಏಪ್ರಿಲ್ 7ರಂದು ‘ಜನಸ್ಪಂದನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಚೇಳೂರು ತಾಲೂಕಿನ ನಲ್ಲಗುಟ್ಟಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಮಂಗಳವಾರ ಬೆಳಿಗ್ಗೆ 10:00 ಗಂಟೆಗೆ ಚಾಲನೆ ಸಿಗಲಿದೆ.

ಕ್ಷೇತ್ರದಲ್ಲಿನ ಮೂಲಸೌಕರ್ಯ, ನಾಗರಿಕ ಸಮಸ್ಯೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಶಾಸಕರು ಸ್ವೀಕರಿಸಿ, ಸ್ಥಳದಲ್ಲೇ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ತಹಶೀಲ್ದಾರ್ ಶ್ವೇತಾ ಬಿ.ಕೆ. ಅವರು,ತಾಲೂಕಿನ ಎಲ್ಲಾ ಇಲಾಖಾ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಅರ್ಜಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ವರದಿ :ಯಾರಬ್. ಎಂ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!