ಸಿಂಧನೂರು : ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದ ತ್ರಿಪುರಾಂತಕ ಕೆರೆ ಹತ್ತಿರ 12ನೇ ಶತಮಾನದ ಅನೇಕ ಬಸವಾದಿ ಶರಣರ ಅರಿವಿನ ಗವಿಗಳು ಇರುವುದಾಗಿ ಇತಿಹಾಸ ಸಾರುತ್ತದೆ ಅದೇ ರೀತಿ ವಿಶ್ವಗುರು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಅರಿವಿನ ಗವಿಯು ಅಲ್ಲಿ ಅಸ್ತಿತ್ವದಲ್ಲಿದೆ ಆದರೆ ಶಿವಶರಣ ಹಡಪದ ಅಪ್ಪಣ್ಣನವರ ಅರವಿನ ಗವಿಯನ್ನು ಬಸವೇಶ್ವರ ದೇವಸ್ಥಾನದ ಪಂಚ ಕಮಿಟಿಯವರು ಅಕ್ರಮವಾಗಿ ಅಸ್ತಕ್ಷೇಪ ಮಾಡಿ ಅನ್ಯ ಶರಣರ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಖಂಡನಿಯ ನಮ್ಮ ಶರಣರ ಇತಿಹಾಸ ಹಾಗೂ ಅರುವಿನ ಗವಿಯನ್ನು ಕಳೆದುಕೊಳ್ಳುವ ಪ್ರಶ್ನೆ ಇಲ್ಲ ಈ ಆಕ್ರಮ ಕೃತ್ಯಕ್ಕೆ ಭಾಗಿಯಾದ ಪಂಚ ಕಮಿಟಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಂಡು ಅಪ್ಪಣ್ಣನವರ ಅರಿವಿನ ಗವಿಯಲ್ಲಿ ಅವರ ಮೂರ್ತಿಯನ್ನು ಪುನಃ ಪ್ರತಿಷ್ಠಾಪನೆ ಮಾಡಿ ಆ ಸ್ಥಳವನ್ನು ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮಾನ್ಯ ತಸಿಲ್ದಾರರ ಮುಖಾಂತರ ಸನ್ಮಾನ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಅಧ್ಯಕ್ಷರು ಭೀಮಣ್ಣ ಬೆಳಗುರ್ಕಿ. ಉಪಾಧ್ಯಕ್ಷರಾದ ಸಿದ್ದು ಮಾಡಿಸಿರವಾರ. ರಾಜಶೇಖರ್ ಸುಲ್ತಾನಪುರ. ಪ್ರ.ಕಾರ್ಯದರ್ಶಿ ವೀರೇಶ್ ಬಳಗನೂರು. ಸಹ ಕಾರ್ಯದರ್ಶಿ ರಘು ಅಲ್ಲೂರ. ಕೆ. ಸೇರಿದಂತೆ ಇನ್ನು ಅನೇಕ ಇದ್ದರು
ವರದಿ : ಬಸವರಾಜ ಬುಕ್ಕನಹಟ್ಟಿ




