ನವದೆಹಲಿ: ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಘೋಷಣೆ ಮಾಡಿದೆ. ಈ ಸಂಬಂಧ ಕರಡು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆಗೆ 60 ದಿನ ಸಮಯ ನೀಡಿದೆ.
663 ಕಿಲೋ ಮೀಟರ್ ಚ.ಕಿಲೋಮೀಟರ್ ವ್ಯಾಪ್ತಿಯ ಪ್ರದೇಶವನ್ನ ಸೂಕ್ಷ್ಮ ವಲಯ, ಅರಣ್ಯದ ಅಂಚಿನಿಂದ 10 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ, ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಬರುವ 75 ಚ. ಕಿಲೋಮೀಟರ್ ಪ್ರದೇಶವನ್ನು ಕಂದಾಯ ಪ್ರದೇಶ ಎಂದು ಘೋಷಿಸಲಾಗಿದೆ.
84 ಚ. ಕಿಲೋಮೀಟರ್ ಪ್ರದೇಶ ವ್ಯಾಪ್ತಿಯ ಕಂದಾಯ ಗ್ರಾಮಗಳು 503 ಚ. ಕಿಲೋ ಮೀಟರ್ ಪ್ರದೇಶದ ಅರಣ್ಯದಲ್ಲಿ ಸೇರಿದೆ.
ಈ ಸಂಬಂಧ ಆಕ್ಷೇಪಣೆಗಳಿದ್ದರೆ ಸಲ್ಲಿಸಲು 60 ದಿನ ಕಾಲಾವಕಾಶ ನೀಡಲಾಗಿದೆ. ಅಧಿಸೂಚನೆಯ ನಂತರ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರ ಈ ಸಂಬಂಧ ಮಾಸ್ಟರ್ ಪ್ಲಾನ್ ಸಿದ್ಧಪಡಿಸಬೇಕು. ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ ಯೋಜನೆ ರೂಪಿಸಬೇಕು ಎಂದು ಹೇಳಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶ ಪಶ್ಚಿಮ ಘಟ್ಟಗಳ ಅರಣ್ಯದಲ್ಲಿದ್ದು, ಹುಲಿ, ಆನೆ ವೈವಿಧ್ಯಮಯ ವನ್ಯಜೀವಿಗಳ ನೆಲೆಯಾಗಿದೆ. ಹಳಿಯಾಳ, ಕಾರವಾರ, ಜೋಯಿಡಾ ತಾಲೂಕುಗಳ ವ್ಯಾಪ್ತಿಯಲ್ಲಿ ವಿಸ್ತರಿಸಿದೆ.




