Ad imageAd image

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದಕ್ಕೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಹತ್ಯೆಗೈದ ಪತ್ನಿ 

Bharath Vaibhav
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದಕ್ಕೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಹತ್ಯೆಗೈದ ಪತ್ನಿ 
CRIME
WhatsApp Group Join Now
Telegram Group Join Now

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂದು ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಪತ್ನಿಯೊಬ್ಬಳು ಪ್ರಿಯಕರನ ಜೊತೆ ಸೇರಿ, ಕೂಲ್ಡ್ರಿಂಕ್ಸ್ ನಲ್ಲಿ ನಿದ್ರೆ ಮಾತ್ರೆ ಹಾಕಿ, ಸಿಲಿಂಡರ್ ನಿಂದ ತಲೆ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಬೆಳಗಾವಿ ಅನಗೋಳದ ಬಾಬಲೇ ಗಲ್ಲಿಯಲ್ಲಿ ಈ ಕೊಲೆ ನಡೆದಿದೆ. ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ್ ಸೂಪ್ಪಣ್ಣವರ (40) ಮೃತ ವ್ಯಕ್ತಿಯಾಗಿದ್ದು, ಘಟನೆ ಸಂಬಂಧ ಪತ್ನಿ ಲಕ್ಷ್ಮೀ ಸೂಪಣ್ಣವರ ಮತ್ತು ಕೈಲಾಶ್ ಅಚ್ಚಿತಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ತಂಪು ಪಾನೀಯದಲ್ಲಿ ನಿದ್ದೆ ಮಾತ್ರ ಹಾಕಿ ನೀಡಿದ್ದ ಆರೋಪಿಗಳು, ಅವಿನಾಶ್ ಕುಸಿದು ಬೀಳ್ತಿದ್ದಂತೆ ಸಿಲಿಂಡರ್​​ನಿಂದ ತಲೆ ಮತ್ತು ಎದೆ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದರು ಎಂಬುದು ಗೊತ್ತಾಗಿದೆ.

ಮಾರ್ಚ್ 6ರಂದು ಸಂಜೆ 4ಕ್ಕೆ ಮನೆಯಿಂದ ಅವಿನಾಶ್ ಕ್ಲಿನಿಕ್‌ಗೆ ಹೋಗಿದ್ದರು. ಈ ವೇಳೆ ಥೆರಪಿ ಮಾಡಿಸಿಕೊಳ್ಳಲೆಂದು ಆರೋಪಿ ಕೈಲಾಶ್ ಕೂಡ ಕ್ಲಿನಿಕ್​​ಗೆ ತೆರಳಿದ್ದ. ಹೋಗುವಾಗ ತಂಪು ಪಾನೀಯದಲ್ಲಿ ನಿದ್ರೆ ಮಾತ್ರೆ ಬೆರಸಿಕೊಂಡು ಹೋಗಿದ್ದ ಈತ, ಥೆರಪಿಗೂ ಮುನ್ನ ಅವಿನಾಶ್​​ಗೆ ಅದನ್ನು ಕುಡಿಸಿದ್ದ. ತಂಪು ಪಾನೀಯ ಕುಡಿಯುತ್ತಿದ್ದಂತೆ ಅವಿನಾಶ್ ಕುಸಿದು ಬಿದ್ದಿದ್ದು, ಅಲ್ಲೇ ಇದ್ದ ಸಿಲಿಂಡರ್​​ನಿಂದ ತಲೆ ಜಜ್ಜಿ ಕೊಲೆ ಮಾಡಿದ್ದ.ಆ ಬಳಿಕ ಕ್ಲಿನಿಕ್​​ಗೆ ಹೋಗಿದ್ದ ಲಕ್ಷ್ಮೀ, ಗಂಡನ ಸಾವಿನ ಬಗ್ಗೆ ಏನೂ ಗೊತ್ತಿಲ್ಲದಂತೆ ಗೋಳಾಟ ನಡೆಸಿದ್ದಳು. ಅಲ್ಲದೆ, ಶುಗರ್ ಹೆಚ್ಚಾಗಿ ಕುಸಿದು ಬಿದ್ದು, ತಲೆಗೆ ಪೆಟ್ಟಾಗಿ ಸಾವನಪ್ಪಿರುವ ಬಗ್ಗೆ ಕತೆ ಹೇಳಿದ್ದಳು.

ಆದರೆ ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮೃತನ ತಾಯಿ ದೂರು ದಾಖಲಿಸಿದ್ದು, ಪ್ರಕರಣ ಬೆನ್ನತ್ತಿದ ಪೊಲೀಸರಿಗೆ ಪತ್ನಿ ಲಕ್ಷ್ಮೀ ಮೇಲೆಯೇ ಅನುಮಾನ ಬಂದಿತ್ತು.

ಎರಡು ವರ್ಷಗಳಿಂದ ಕೈಲಾಶ್ ಜೊತೆಗೆ ಲಕ್ಷ್ಮೀ ಅನೈತಿಕ ಸಂಬಂಧ ಹೊಂದಿದ್ದು, ಮೊಬೈಲ್ ರಿಚಾರ್ಜ್ ಮಾಡಿಸಲು ಹೋದಾಗ ಪೋನ್ ನಂಬರ್ ಶೇರ್ ಆಗಿತ್ತು. ಬಳಿಕ ಅವಿನಾಶ ಜೊತೆಗೂ ಕೈಲಾಶ್ ಉತ್ತಮ ಸಂಬಂಧ ಹೊಂದಿದ್ದ. ಇದನ್ನೇ ಬಂಡವಾಳ ಮಾಡಿಕೊಂಡು ಲಕ್ಷ್ಮೀ ಭೇಟಿಗೆ ಬರುತ್ತಿದ್ದ.

ಅವಿನಾಶ್ ಮನೆಯ ಕೂಗಳತೆ ದೂರದಲ್ಲಿ ಕೈಲಾಶ್ ಮೊಬೈಲ್ ಶಾಪ್ ಇದ್ದು, ಈ ವಿಚಾರ ಗೊತ್ತಾಗಿ ಪತ್ನಿ ಮತ್ತು ಕೈಲಾಶ್​​ಗೆ ಅವಿನಾಶ್​​ ವಾರ್ನ್​​ ಕೂಡ ಮಾಡಿದ್ದ. ಇದೇ ಸಿಟ್ಟಿಗೆ ಪತಿ ಅವಿನಾಶ್ ಕೊಲೆಗೆ ಲಕ್ಷ್ಮೀ ಸ್ಕೆಚ್ ಹಾಕಿದ್ದಳು. ಒಂದು ತಿಂಗಳಿಂದ ಅವಿನಾಶ್ ಕೊಲೆಗೆ ಕೈಲಾಶ್‌ ಮೇಲೆ ಒತ್ತಡ ಹಾಕ್ತಿದ್ದಳು ಎಂಬುದೀಗ ಬಯಲಾಗಿದೆ. ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!