Ad imageAd image

ಕೈಗಳಿಗೆ ಬಟ್ಟೆ ಕಟ್ಟಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ 

Bharath Vaibhav
ಕೈಗಳಿಗೆ ಬಟ್ಟೆ ಕಟ್ಟಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ 
WhatsApp Group Join Now
Telegram Group Join Now

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಬಾಲಕಿಯರ ಮೃತದೇಹಗಳು ಪತ್ತೆಯಾಗಿವೆ.ಅನುಮಾನಾಸ್ಪದವಾಗಿ ಬಾಲಕಿಯರು ಮೃತಪಟ್ಟಿದ್ದಾರೆ.

ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ಹೊರವಲಯದಲ್ಲಿರುವ ಹೊಂಡದಲ್ಲಿ ಬಾಲಕಿಯರ ಮೃತದೇಹಗಳು ಪತ್ತೆಯಾಗಿದ್ದು, ಅವರ ಕೈಗಳಿಗೆ ಬಟ್ಟೆ ಕಟ್ಟಿದ ಸ್ಥಿತಿಯಲ್ಲಿ ಕಂಡುಬಂದಿದೆ.ಬಾಲಕಿಯುರ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಭಾನುವಾರ ಸಂಜೆ ಬಹಿರ್ದೆಸೆಗೆ ತೆರಳಿದ್ದ ಬಾಲಕಿಯರು ಮನೆಗೆ ಬಂದಿರಲಿಲ್ಲ. ಅವರಿಗಾಗಿ ಕುಟುಂಬದವರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಹೊಂಡದ ಸಮೀಪ ಚಪ್ಪಲಿಗಳು ಪತ್ತೆಯಾಗಿದ್ದರಿಂದ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳನ್ನು ಕಳುಹಿಸಲಾಗಿದೆ. ಬಾಲಕಿಯರ ಸಾವಿನ ಕುರಿತಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!