ಕಲಘಟಗಿ : ಪ್ರತಿ ವರ್ಷದಂತೆ ದಂಡಧಿಕಾರಿಯವರ ನೇತೃತ್ವದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ ಸಂವಿಧಾನ ಪೀಠಿಕೆಯನ್ನು ಪಟಿಸುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು ಹಾಗೂ ಎಸ್ ಎಸ್ ಲ್ ಸಿ ವಿದ್ಯಾಭ್ಯಾಸದಲ್ಲಿ ಹೆಚ್ಚು ಅಂಕಗಳನ್ನು ಪಡೆದ ಎಲ್ಲಾ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು ಮತ್ತು ಡಾ.ಅಂಬೇಡ್ಕರ್ ಅವರ ಕುರಿತು ಉಪನ್ಯಾಸವನ್ನು ಡಾ. ಮಹೇಂದ್ರ ಜಿ ಹರಿಹರ ಅವರು ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಮುರಳಿ ಅವರು ಅಂಬೇಡ್ಕರ್ ಅವರ ಬೆಳವಣಿಗೆ ಹಾಗೂ ಎಲ್ಲ ಸಮಾಜದ ಏಳಿಗೆಗೆ ಅಪಾರ ಕೊಡುಗೆಗಳು, ಎಲ್ಲ ಮಹಿಳೆಯರಿಗೆ ಹಕ್ಕುಗಳನ್ನು ನೀಡಿದರು ಹಾಗೂ ಅವರು ವಿದ್ಯಾಭ್ಯಾಸಕ್ಕೆ ಹೆಚ್ಚು ಮಹತ್ವವನ್ನು ನೀಡಿದ್ದಾರೆ ಎಂದರು.

ವಿದ್ಯಾರ್ಥಿಗಳು ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನದ ಬಗ್ಗೆ ಭಾಷಣ ಮಾಡಿದರು. ಸಮಾಜದ ಮುಖಂಡರಿಗೂ ಮತ್ತು ತಾಲೂಕ ಪತ್ರಕರ್ತರಿಗೆ ಸನ್ಮಾನ ಮಾಡಲಾಯಿತು.
ಈ ಸಂಧರ್ಭದಲ್ಲಿ ತಾಲೂಕ ಪಂಚಾಯತ್ ಅಧಿಕಾರಿ ಪರಶುರಾಮ್ ಸಾವಂತ್, ಗ್ಯಾರಂಟಿ ಯೋಜನೆಯ ತಾಲೂಕ ಅಧ್ಯಕ್ಷ ಬಸವರಾಜ್ ಬಾವ್ಕರ, ಪಪಂ ಮುಖ್ಯ ಅಧಿಕಾರಿ ಚಂದ್ರಶೇಖರ್ ಬಿ, ಸಮಾಜ ಕಲ್ಯಾಣ ಅಧಿಕಾರಿ ಅನುಷಾ ಹಿರೇಮಠ, ಪೊಲೀಸ್ ಇನ್ಸೆಕ್ಟರ್ ಶ್ರೀಶೈಲ್ ಕೌಜಲಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮುಖಂಡರುಗಳು ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.
ವರದಿ : ನಿತೀಶಗೌಡ ತಡಸ ಪಾಟೀಲ್




