ಧಾರವಾಡ : ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ, ಇಂದು ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಗೆ ಆಗಮಿಸಿದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮೂವರು ವಿದ್ಯಾರ್ಥಿ ಮುಖಂಡರು ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಧಾರವಾಡದ ಜಯನಗರ ವೃತ್ತದ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡರು ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ದಿಕ್ಕಾರ ಹೋಗಿ ಆಕ್ರೋಶ ಹೊರ ಹಾಕಿದರು.ಮುಖಂಡರಾದ ಯಲ್ಲಪ್ಪ ಹೆಗಡೆ, ನಾಗರಾಜ್ ಚಲವಾದಿ ಚಾಣಕ್ಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ರಾಜ್ಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಈ ಒಂದು ಪ್ರತಿಭಟನೆ ನಡೆಯುತ್ತಿದೆ 2.84 ಲಕ್ಷ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ.
ಕಳೆದ ಕೆಲವು ದಿನಗಳ ಹಿಂದೆ ಕೂಡ ಧಾರವಾಡದಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ ನಡೆದಿತ್ತು. ಈ ವೇಳೆ ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದಾಗ ಪ್ರತಿಭಟನೆ ಕೈಬಿಟ್ಟಿದ್ದರು. ಆದರೆ ಇದೀಗ ಮತ್ತೆ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.




