Ad imageAd image

ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರಿಂದ ಚಾಲನೆ

Bharath Vaibhav
ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರಿಂದ ಚಾಲನೆ
WhatsApp Group Join Now
Telegram Group Join Now

ಧಾರವಾಡ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರಣಿಗೆಗೆ ಇಂದು (ಏ.14) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಚಾಲನೆ ನೀಡಿದರು.

ವಿವಿಧ ಕಲಾತಂಡದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರದ ಭವ್ಯ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಪ್ರಾರಂಭವಾಗಿ ಧಾರವಾಡ ನಗರದ ಕೋರ್ಟ ಸರ್ಕಲ್, ಸಂಗಮ ಸರ್ಕಲ್, ಮದಾರಮಡ್ಡಿ, ಭೂಸಪ್ಪ ಚೌಕ, ಮೇದಾರ ಓಣಿ, ಕೆ.ಸಿ.ಸಿ ಬ್ಯಾಂಕ್ ಮೂಲಕ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದವರೆಗೆ ಜರುಗಿತು.

ಈ ಸಂದರ್ಭದಲ್ಲಿ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಎಡಿಸಿ ಗೀತಾ ಸಿ.ಡಿ., ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ ಹೆಬ್ಬಳ್ಳಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಂಗಾಧರ ದೊಡಮನಿ, ಪಶು ಪಾಲನೆ ಇಲಾಖೆಯ ಉಪನಿರ್ದೇಶಕ ಡಾ.ಎಸ್.ವಿ.ಸಂತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಎಲ್ಲಾ ಸಮುದಾಯದ ಮುಖಂಡರು, ಗಣ್ಯವ್ಯಕ್ತಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಯಲ್ಲಿ ಜಾನಪದ ಕುಣಿತ, ಕರಡಿ ಮಜಲು, ನಂದಿಕೋಲು, ಜಗ್ಗಲಿಗಿ ಮೇಳ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿ, ಮೆರವಣಿಗೆಯ ಮೆರಗು ಹೆಚ್ಚಿಸಿದವು.

ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹು-ಧಾ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು (ಏ.14) ಬೆಳಿಗ್ಗೆ ಆಲೂರು ವೆಂಕಟರಾವ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಸೇರಿದಂತೆ ವಿವಿಧ ಗಣ್ಯರಿಂದ ಮಾಲಾರ್ಪಣೆ ಮಾಡಲಾಯಿತು.

ವರದಿ:ವಿನಾಯಕ ಗುಡ್ಡದಕೇರಿ

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!