ನವದೆಹಲಿ : ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ಸಂಸತ್ತಿನಲ್ಲಿ ಹಿನ್ನಡೆಯಾದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮಹಿಳೆಯರ ಬಳಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಇದೇ ವೇಳೆ, ಮಹಿಳೆಯರ ಕನಸುಗಳನ್ನು ನುಚ್ಚುನೂರು ಮಾಡಿದ ವಿರೋಧ ಪಕ್ಷಗಳನಡವಳಿಕೆಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ.
“ನನ್ನನ್ನು ಕ್ಷಮಿಸಿ” ಎಂದ ಪ್ರಧಾನಿ:
ದೇಶದ ತಾಯಂದಿರು ಮತ್ತು ಸಹೋದರಿಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಾನು ಇಂದು ನಿಮ್ಮ ಮುಂದೆ ಕ್ಷಮೆ ಕೇಳಲು ಬಂದಿದ್ದೇನೆ.
ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರುವಲ್ಲಿ ನಾವು ಸದ್ಯಕ್ಕೆ ಯಶಸ್ವಿಯಾಗಲಿಲ್ಲ. ನಿಮ್ಮ ಹಕ್ಕುಗಳನ್ನು ಒದಗಿಸಲು ನಮಗೆ ಸಾಧ್ಯವಾಗದಿರುವುದಕ್ಕೆ ನಾನು ವಿಷಾದಿಸುತ್ತೇನೆ,” ಎಂದು ಭಾವುಕರಾಗಿ ನುಡಿದರು.




