ಭುವನೇಶ್ವರ: ದೇಶದ ಅತ್ಯಂತ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆ ‘ಫೆಮಿನಾ ಮಿಸ್ ಇಂಡಿಯಾ 2026’ರ ಅದ್ಧೂರಿ ಸಮಾರೋಪ ಸಮಾರಂಭದಲ್ಲಿ ಗೋವಾದ ಸುಂದರಿ ಸಾಧ್ವಿ ಶೈಲ್ Sadhvi Sail) ಅವರು ಈ ವರ್ಷದ ಮಿಸ್ ಇಂಡಿಯಾ ವರ್ಲ್ಡ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ ಆವೃತ್ತಿಯ ಈ ಸೌಂದರ್ಯ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಸಾಧ್ವಿ ಅವರು ಈ ಸಾಧನೆ ಮಾಡಿದ್ದಾರೆ. ಮಹಾರಾಷ್ಟ್ರದ ರಾಜನಂದಿನಿ ಪವಾರ್ ಪ್ರಥಮ ರನ್ನರ್ ಅಪ್ ಆಗಿ ಹೊರಹೊಮ್ಮಿದರೆ, ಜಮ್ಮು ಮತ್ತು ಕಾಶ್ಮೀರದ ಶ್ರೀ ಅದ್ವೈತ ದ್ವಿತೀಯ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ.
ಯಾರು ಈ ಸಾಧ್ವಿ ಶೈಲ್?
ಗೋವಾದ ಸುಂದರ ಪರಿಸರದಲ್ಲಿ ಬೆಳೆದ ಸಾಧ್ವಿ ಶೈಲ್ ಅವರಿಗೆ ಆರಂಭದಿಂದಲೂ ಸಮಾಜದ ಬಗ್ಗೆ ಮತ್ತು ಅಂತರರಾಷ್ಟ್ರೀಯ ಸಂಬಂಧಗಳ ಬಗ್ಗೆ ಅಪಾರ ಆಸಕ್ತಿ. ಅರ್ಥಶಾಸ್ತ್ರ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳಲ್ಲಿ ಆಸಕ್ತಿ ಹೊಂದಿರುವ ಇವರು, ಕೇವಲ ಸೌಂದರ್ಯವಷ್ಟೇ ಅಲ್ಲದೆ ಬೌದ್ಧಿಕವಾಗಿಯೂ ಮುಂಚೂಣಿಯಲ್ಲಿದ್ದಾರೆ.




