ಕಲಬುರಗಿ : ಇತ್ತೀಚಿಗೆ ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿದ್ದು, ಎದೆನೋವಿನಿಂದ 17 ವರ್ಷದ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.ಚಿತ್ತಾಪುರ ತಾಲ್ಲೂಕಿನ ನಾಲವಾರ ಗ್ರಾಮದ ನಿವಾಸಿ ಕೊರೇಶ ಸಿದ್ದಣ್ಣ ಮದ್ರಿ (17) ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಕಲಬುರಗಿಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಕೊರೇಶಗೆ ಮಂಗಳವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ನಾಲವಾರ ಸ್ಟೇಷನ್ ಖಾಸಗಿ ಆಸ್ಪತ್ರೆಗೆ ತೆರಳುವ ವೇಳೆ ದಾರಿ ಮಧ್ಯೆಯೇ ಹೃದಯಾಘಾತವಾಗಿದೆ.
ಸ್ನೇಹಿತರು ಬೈಕ್ ನಿಲ್ಲಿಸಿ ಆಟೊ ಮೂಲಕ ಆಸ್ಪತ್ರೆಗೆ ತೆರಳುವಷ್ಟರಲ್ಲಿ ಕೊರೇಶ ಮೃತಪಟ್ಟಿದ್ದು, ಒಬ್ಬನೇ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.