ಕೇAದ್ರಪಾಡಾ: ಹದಿನೇಳು ವರ್ಷದ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ೫೦ ವರ್ಷದ ವ್ಯಕ್ತಿಯೋರ್ವನನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಜೈಪುರ ಜಿಲ್ಲೆಯಲ್ಲಿ ನಡೆದಿದ್ದು, ಸೋಮವಾರ ರಾತ್ರಿ ಬಾಲಕಿ ಮನೆಗೆ ಹಿಂದುರುಗುತ್ತಿದ್ದಾಗ ಯಾರೂ ಇಲ್ಲದ ಸ್ಥಳಕ್ಕೆ ಬಾಲಕಿಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಬಾಲಕಿ ತಾಯಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಅತ್ಯಾಚಾರ ಎಸಗಿದ ವ್ಯಕ್ತಿಯು ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಂದು ಹಾಕುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಪ್ರಕರಣದಲ್ಲಿ ಆರೋಪಿಸಿದ್ದಾರೆ. ಪ್ರಕರಣ ದಾಖಲಾದ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.
ಬಾಲಕಿಯನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ವೈದ್ಯರು ತಪಾಸಣೆ ಬಳಿಕ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಖಚಿತ ಪಡಿಸಿದ್ದಾರೆ. ಆರೋಪಿಯನ್ನು ಜೈಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಲಯದಿಂದ ಜಾಮೀನು ನಿರಾಕರಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.
ಬಾಲಕಿ ಮೇಲೆ ಅತ್ಯಾಚಾರ: ೫೦ ವರ್ಷದ ವ್ಯಕ್ತಿ ಬಂಧನ




