Join The Telegram | Join The WhatsApp |
ಕೋಲಾರ: ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಮುಷ್ಟೂರು ಗ್ರಾಮದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪೋಷಕರು ಬುದ್ದಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಉದಯ್ ಕುಮಾರ್ ಸೋಮವಾರ ವಿಷ ಸೇವಿಸಿದ್ದ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಗ್ರಾಮದ ಸರ್ಕಾರಿ ಆದರ್ಶ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉದಯ್ ಕುಮಾರ್ , ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಸೋಮವಾರ ವಿಷಸೇವಿಸಿದ್ದ, ಕೂಡಲೇ ಉದಯ್ ಕುಮಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಬಗ್ಗೆ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Join The Telegram | Join The WhatsApp |