ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ಹಿಂಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿರುವ ವಿಪಕ್ಷ ಬಿಜೆಪಿ ನಾಯಕರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ಬಳಿಕ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದೂರು ನೀಡಿತು. ಹುಬ್ಬಳ್ಳಿ ಗಲಭೆ ಕೇಸ್ ವಾಪಾಸ್ ಪಡೆದುರುವ ರಾಜ್ಯ ಸರ್ಕಾರದ ಬಗ್ಗೆ ದೂರು ನೀಡಿದೆ.
ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಆರ್.ಅಶೋಕ್, ಪ್ರಕರಣ ಹಿಂಪಡೆದ ಕುರಿತು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಪತ್ರ ಸಲ್ಲಿಸಲಾಗಿದೆ.
ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಬಗ್ಗೆ ಸರ್ಕಾರದ ಬಳಿ ಸ್ಪಷ್ಟನೆ ಕೇಳಲಾಗುವುದು ಎಂದು ರಾಜ್ಯಪಾಲರು ತಿಳಿಸಿದ್ದಾರೆ. ಸರ್ಕಾರದ ಈ ಕ್ರಮದ ವಿರುದ್ಧ ಹುಬ್ಬಳ್ಳಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.