Ad imageAd image

ಬೆಂಗಳೂರಿನ ಪ್ರತಿಷ್ಠಿತ ಪಂಚತಾರಾ ಹೋಟೆಲ್ ಗೆ ಬಾಂಬ್ ಬೆದರಿಕೆ

Bharath Vaibhav
ಬೆಂಗಳೂರಿನ ಪ್ರತಿಷ್ಠಿತ ಪಂಚತಾರಾ ಹೋಟೆಲ್ ಗೆ ಬಾಂಬ್ ಬೆದರಿಕೆ
WhatsApp Group Join Now
Telegram Group Join Now

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಪಂಚತಾರಾ ಹೋಟೆಲ್ ಐಬಿಎಸ್‌ಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಬಂದಿದೆ. ರಾಜಾರಾಮ್ ಮೋಹನ್ ರಾಯ್ ರಸ್ತೆಯಲ್ಲಿರುವ ಐಬಿಎಸ್ ಹೋಟೆಲ್ ಮೇಲ್ ಐಡಿಗೆ ಅಪರಿಚಿತರಿಂದ ಬೆದರಿಕೆ ಸಂದೇಶ ಬಂದಿದೆ.

ಇದನ್ನು ನೋಡಿದ ಹೋಟೆಲ್​ ಸಿಬ್ಬಂದಿ ಆತಂಕಗೊಂಡಿದ್ದು, ಕೂಡಲೇ ಸಂಪಂಗಿರಾಮನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶ್ವಾನ ದಳ, ಬಾಂಬ್ ಪತ್ತೆ ದಳ ದೌಡಾಯಿಸಿ ಹೋಟೆಲ್​ನಲ್ಲಿದ್ದ ಎಲ್ಲರನ್ನೂ ಹೊರಗೆ ಕಳುಹಿಸಿ ತಪಾಸಣೆ ನಡೆಸಿದರು.

ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಯಾವುದೇ ಹೋಟೆಲ್ ಹೆಸರು ಅಥವಾ ಸ್ಥಳ ಉಲ್ಲೇಖಿಸದೆ ಐಬಿಎಸ್ ಹೋಟೆಲ್ ಮೇಲ್ ಐಡಿಗೆ ಅಪರಿಚಿತರು ಬೆದರಿಕೆ ಸಂದೇಶ ಕಳುಹಿಸಿದ್ದು, ಯಾವುದೇ ಕ್ಷಣದಲ್ಲಿ ಸ್ಫೋಟವಾಗಬಹುದು ಎಂದು ಉಲ್ಲೇಖಿಸಿದ್ದಾರೆ.

ಬಾಂಬ್ ಬೆದರಿಕೆ ಸಂದೇಶ ನೋಡಿ ಹೋಟೆಲ್ ಸಿಬ್ಬಂದಿ ಕೂಡಲೇ ಸಂಪಂಗಿರಾಮನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ಶ್ವಾನ ದಳ, ಬಾಂಬ್ ಪತ್ತೆ ದಳ ಐಬಿಎಸ್ ಹೋಟೆಲ್​ನಲ್ಲಿ ತಪಾಸಣೆ ನಡೆಸಿದೆ. ಆದ್ರೆ, ಹೋಟೆಲ್​ನಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!