ಬೆಂಗಳೂರು: 39 ವರ್ಷದ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿಯ ಕತ್ತು ಹಿಸುಕಿ ಕೊಂದು ನಂತರ ಪೊಲೀಸ್ ಠಾಣೆಗೆ ಆಗಮಿಸಿ ಶರಣಾಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಪೊಲೀಸರು ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಆರೋಪಿ ಚಂದ್ರಶೇಖರ್ ನನ್ನು ವಶಕ್ಕೆ ಪಡೆದಿದ್ದಾರೆ. ನಂತರ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಆರೋಪಿಗೆ ತನ್ನ ಪತ್ನಿಯ ಶೀಲದ ಬಗ್ಗೆ ಅನುಮಾನವಿತ್ತು ಮತ್ತು ಪ್ರಾಥಮಿಕವಾಗಿ ಇದು ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಗಳವಾರವೂ ಸಹ, ಚಂದ್ರಶೇಖರ್ ಮತ್ತು ಅವರ 35 ವರ್ಷದ ಪತ್ನಿ ವೇಲಾರಮಣಿ ನಡುವೆ ಜಗಳ ನಡೆದಿದೆ. ಈ ಜಗಳ ವಿಕೋಪಕ್ಕೆ ತಿರುಗಿ ಆಕೆಯನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಂದ್ರಶೇಖರ್ ಪತ್ನಿಯನ್ನು ಕೊಂದ ನಂತರ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ಹೋಗಿ ತಾನೇ ಪತ್ನಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ವಿಚಾರಣೆಯ ಸಮಯದಲ್ಲಿ, ಆಕೆಗೆ ಬೇರೊಬ್ಬರೊಂದಿಗೆ ಸಂಬಂಧವಿದೆ ಎಂದು ಶಂಕಿಸಿರುವುದಾಗಿ ಆರೋಪಿ, ಪೊಲೀಸರಿಗೆ ತಿಳಿಸಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಚಂದ್ರಶೇಖರ್ ಸುಮಾರು 12 ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರಿಗೆ 10 ವರ್ಷ ಮತ್ತು ಆರು ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಘಟನೆ ನಡೆದ ಸಮಯದಲ್ಲಿ ಮಕ್ಕಳು ಶಾಲೆ ಹೋಗಿದ್ದರು ಅವರು ತಿಳಿಸಿದ್ದಾರೆ.