Ad imageAd image

ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ : ಸಿದ್ಧರಾಮಯ್ಯ ವಿರುದ್ಧ ದೂರು ದಾಖಲು

Bharath Vaibhav
ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ : ಸಿದ್ಧರಾಮಯ್ಯ ವಿರುದ್ಧ ದೂರು ದಾಖಲು
WhatsApp Group Join Now
Telegram Group Join Now

ಬೆಂಗಳೂರು : ಇತ್ತೀಚಿಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಅಪರಾಧಗಳ ಕುರಿತಂತೆ ಮಾತನಾಡುವ ಬರದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಇದೀಗ ಈ ಒಂದು ಹೇಳಿಕೆ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಖಾಸಗಿ ದೂರು ಸಲ್ಲಿಸಲಾಗಿದೆ. ಎಸ್ ಕಿರಣ್ ಎಂಬುವವರಿಂದ ಕೋರ್ಟಿಗೆ ಖಾಸಗಿ ದೂರು ಸಲ್ಲಿಕೆಯಾಗಿದೆ. BNS ಸೆಕ್ಷನ್ 299, 352, 356 (2) ರ ಅಡಿ ಕ್ರಮ ಕೋರಿ ಖಾಸಗಿ ದೂರು ದಾಖಲಾಗಿದೆ.

ಸಿಎಂ ಹೇಳಿದ್ದೇನು?

ವಿಧಾನಸಭೆಯಲ್ಲಿ ರಾಜ್ಯದಲ್ಲಿ ಅಪರಾಧಗಳ ಕುರಿತಂತೆ ಚರ್ಚೆ ನಡೆಯುವಾಗ, ರಾಜ್ಯದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ಗಳಿಂದಲೇ ಅಪರಾಧಗಳು ನಡೆಯುತ್ತವೆ. ನಿಮ್ಮಿಂದ ಹಾಗೂ ಆರ್ ಎಸ್ ಎಸ್ ನವರಿಂದ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ನಡೆಯುತ್ತವೆ ಎಂದು ಹೇಳಿಕೆ ನೀಡಿದ್ದರು.

ಈ ಒಂದು ಹೇಳಿಕೆಗೆ ವಿಪಕ್ಷ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.

WhatsApp Group Join Now
Telegram Group Join Now
Share This Article
error: Content is protected !!