ಚಿಕ್ಕಬಳ್ಳಾಪುರ : ನಗರಸಭೆ ಪೌರಾಯುಕ್ತಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಶಿಡ್ಲಘಟ್ಟ ಪೊಲೀಸರು ಕೇರಳದಲ್ಲಿ ರಾಜೀವ್ ಗೌಡನನ್ನು ಬಂಧಿಸಿ ಚಿಕ್ಕಬಳ್ಳಾಪುರಕ್ಕೆ ಕರೆತರುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿಡ್ಲಘಟ್ಟ ಪೊಲೀಸರು ಕೇರಳದ ಗಡಿಯಲ್ಲಿ ರಾಜೀವ್ ಗೌಡನನ್ನು ಬಂಧಿಸಿ ಚಿಕ್ಕಬಳ್ಳಾಪುರಕ್ಕೆ ಕರೆತರುತ್ತಿದ್ದಾರೆ ಎಂದು ತಿಳಿದುಬಂದಿದೆ.
ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜನವರಿ 12ರಂದು ಕರೆ ಮಾಡಿದ್ದ ರಾಜೀವ್ ಗೌಡ, ನಿಂದಿಸಿದ್ದಲ್ಲದೇ, ಧಮ್ಕಿ ಹಾಕಿ ಜೀವಬೆದರಿಕೆಯೊಡ್ಡಿದ್ದರು.
ಈ ಕುರಿತ ಆಡಿಯೋ ಕೂಡ ವೈರಲ್ ಆಗಿತ್ತು. ಪೌರಾಯುಕ್ತೆ ಅಮೃತಾಗೌಡ, ರಾಜೀವ್ ಗೌಡ ವಿರುದ್ಧ ಶಿಡ್ಲಘಟ್ಟ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜೀವ್ ಗೌಡ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.
ಬಂಧನ ಭೀತಿಯಲ್ಲಿದ್ದ ರಾಜೀವ್ ಗೌಡ, ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಅಲ್ಲದೇ ಹೈಕೋರ್ಟ್ ಕೂಡ ರಾಜೀವ್ ಗೌಡ ಸಲ್ಲಿಸಿದ್ದ ಎಫ್ ಐ ಆರ್ ರದ್ದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.
ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ರಾಜೀವ್ ಗೌಡ ವಿರುದ್ಧ ಲುಕ್ ಔಟ್ ನೋಟಿಸ್ ಜರಿ ಮಾಡಿದ್ದರು. ಅಲ್ಲದೇ ರಾಜೀವ್ ಗೌಡ ಬಂಧನಕ್ಕಾಗಿ ಪೊಲೀಸರು ನಾಲ್ಕು ವಿಶೇಷ ತಂಡ ರಚನೆ ಮಾಡಿದ್ದರು.
ಪೊಲೀಸರ ಕಣ್ತಪ್ಪಿಸಿ ರಾಜೀವ್ ಗೌಡ ಬೆಂಗಳೂರಿನಿಂದ ಮಂಗಳೂರಿಗೆ ಸಾಗಿ, ಅಲ್ಲಿಂದ ಕೇರಳದತ್ತ ತೆರಳಿರುವ ಬಗ್ಗೆ ಪೊಲೀಸರುಗೆ ಮಾಹಿತಿ ಲಭ್ಯವಾಗಿತ್ತು. ಇದೀಗ ಕೇರಳದ ಗಡಿಭಾಗದಲ್ಲಿ ರಾಜೀವ್ ಗೌಡನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.




