Ad imageAd image

ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾದ ಜೋಡಿ ಆತ್ಮಹತ್ಯೆ

Bharath Vaibhav
ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾದ ಜೋಡಿ ಆತ್ಮಹತ್ಯೆ
WhatsApp Group Join Now
Telegram Group Join Now

ವಿಜಯಪುರ: ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದಂತ ನವ ಜೋಡಿ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ನಗರದ ಹೊರ ಭಾಗದಲ್ಲಿರುವಂತ ಶ್ರೀ ಸಿದ್ದೇಶ್ವರ ಬಡಾವಣೆಯ ಮನೆಯಲ್ಲಿ ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದಂತ ಮನೋಜ್ ಕುಮಾರ್ ಪೋಳ(30) ಹಾಗೂ ರಾಖಿ(23) ನೇಣಿಗೆ ಶರಣಾಗಿದ್ದಾರೆ.

ತಡರಾತ್ರಿ ಊಟ ಮಾಡಿದ ಬಳಿಕ ನವ ವಿವಾಹಿತರು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ. ಮನೋಜ್ ಹಾಗೂ ರಾಖಿ ಇಬ್ಬರೇ ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ.

ಊರಿಗೆ ಹೋಗಿದ್ದಂತ ಮನೋಜ್ ಕುಮಾರ್ ತಾಯಿ ಇಂದು ಮನೆಗೆ ವಾಪಾಸ್ ಆದಾಗ ಈ ಘಟನೆ ಬೆಳಕಿಗೆ ಬಂದಿದೆ. ನವ ವಿವಾಹಿತ ದಂಪತಿ ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಈ ಸಂಬಂಧ ವಿಜಯಪುರದ ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ದೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!