Ad imageAd image

ಸುಳ್ಳು ಕೇಸ್: ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ

Bharath Vaibhav
ಸುಳ್ಳು ಕೇಸ್: ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ
WhatsApp Group Join Now
Telegram Group Join Now

ಹುಬ್ಬಳ್ಳಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರ ವಿರುದ್ಧ ಕೇಂದ್ರ ಸರ್ಕಾರ ದ್ವೇಷ ರಾಜಕೀಯ ನಡೆಸುತ್ತಿದೆ ಎಂದು ಆರೋಪಿಸಿ ಇಂದು ಮಹಾನಗರ ಜಿಲ್ಲಾ ಹಾಗೂ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಅರವಿಂದ ನಗರದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ನೂರಾರು ಕಾರ್ಯಕರ್ತರನ್ನು ಬಂಧಿಸಿ ತದನಂತರ ಬಿಡುಗಡೆಗೊಳಿಸಿದರು.

ಸತ್ಯಕ್ಕೆ ಸಾವಿಲ್ಲ ಸುಳ್ಳಿಗೆ ಆಯಸ್ಸಿಲ್ಲ ಎಂಬAತೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೋರ್ಟ ಆದೇಶ ನೀಡಿದ್ದರೂ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡು ಬಿಜೆಪಿಯ ದ್ವೇಷದ ರಾಜಕಾರಣ ಖಂಡಿಸಿ ಎಐಸಿಸಿ ನಿರ್ದೇಶನದಂತೆ ರಾಜ್ಯದಾದ್ಯಂತ ಬಿಜೆಪಿ ಕಚೇರಿಗಳ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಡಿಸಿಸಿ ಕಾಂಗ್ರೆಸ್ ಕಚೇರಿಯಿಂದ ಬಿಜೆಪಿ ಕಚೇರಿವರೆಗೆ ಪಾದಯಾತ್ರೆ ಮೂಲಕ ತೆರಳಿ ಘೋಷಣೆ ಕೂಗುತ್ತ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಪ್ರಮುಖರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ವ್ಯಾನ್‌ನಲ್ಲಿ ಕರೆದುಕೊಂಡು ಬಂದು ಹಳೆಯ ಸಿಎಆರ್ ಮೈದಾನದಲ್ಲಿ ಬಿಡುಗಡೆ ಮಾಡಿದರು.

ಮಹಾನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಗ್ರಾಮೀಣ ಅಧ್ಯಕ್ಷ ಅನಿಲಕುಮಾರ ಪಾಟೀಲ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ಡಂಗನವರ, ಬ್ಲಾಕ್ ಅಧ್ಯಕ್ಷ ಶರೀಫ್ ದರಗಾದ, ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ ಪಾಟೀಲ, ಸದಾನಂದ ಡಂಗನವರ, ಪಾಲಿಕೆ ಸದಸ್ಯ ಇಕ್ಬಾಲ್ ನವಲೂರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಮ್ಮ ಬಲೋಗಿ, ಪದಾಧಿಕಾರಿಗಳಾದ ನವೀದ ಮುಲ್ಲಾ, ದೊಡ್ಡರಾಯಪ್ಪ ದೊಡ್ಡಮನಿ, ಈರಣ್ಣ ಹಿರೇಹಾಳ, ಸುನೀತಾ ಹುರಕಡ್ಲಿ, ಮಹ್ಮದ ಅಲಿ ಪಿಂಜಾರ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.
ವಿಪಕ್ಷಗಳ ಮೇಲೆ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ಸೀಳುನಾಯಿಗಳಂತೆ ಬಳಸಿಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಕೋರ್ಟ ಬಿಜೆಪಿಗೆ ಮಂಗಳಾರತಿ ಮಾಡಿದರೂ ಬುದ್ದಿ ಬಂದಿಲ್ಲ ಮತ್ತೆ ನರೆಗಾ ಹೆಸರು ಬದಲಾಯಿಸಲು ಹೊರಟಿದ್ದಾರೆಂದು ಮಹಾನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ ಹೇಳಿದರು.
ಕೇಂದ್ರದ ಸರ್ವಾಧಿಕಾರಿ ಧೋರಣೆ ಮತ್ತು ಪ್ರತಿಪಕ್ಷಗಳನ್ನು ಮುಗಿಸುವ ಹುನ್ನಾರ ಎಂದು ಅನಿಲಕುಮಾರ ಪಾಟೀಲ ಹೇಳಿದರು. ಮಾತನಾಡಿದ ಇತರ ಮುಖಂಡರು ಬಿಜೆಪಿ ದ್ವೇಷ ರಾಜಕೀಯ ಖಂಡಿಸಿದರು.

ವರದಿ:ಸುಧೀರ್ ಕುಲಕರ್ಣಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!